ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shivamogga News: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

Shivamogga News: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

Prabhakara R Prabhakara R Jul 5, 2025 9:47 PM

ಶಿವಮೊಗ್ಗ: ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದಿರುವ ಘಟನೆ ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದಿರುವುದು ಮಾತ್ರವಲ್ಲದೇ, ಗಣೇಶ ಮೂರ್ತಿಗೆ ಒದ್ದು ದುರ್ನಡತೆ ತೋರಿದ್ದಾನೆ.

ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ; ಚಿಕಿತ್ಸೆ ಫಲಿಸದೇ ಯುವತಿ ಸಾವು

ಮೈಸೂರು: ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪರಿಣಾಮ ಯುವತಿ ಮೃತಪಟ್ಟಿರುವ ಘಟನೆ (Stabbing case) ನಗರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಪೂರ್ಣಿಮಾ (36) ಮೃತ ಯುವತಿ. ಅಭಿಷೇಕ್ ಕೊಲೆ ಆರೋಪಿ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ಯುವತಿ ಪೂರ್ಣಿಮಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆರೋಪಿ ಅಭಿಷೇಕ್‌ ತಲೆಮರೆಸಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಅಂಬೇಡ್ಕರ್‌ ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿಆಕೆಗೆ ಚಾಕುವಿನಿಂದ ಇರಿದಿದ್ದಾನೆ.

ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.