2nd PUC Exam 2 Result: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ
2nd PUC Exam 2 Result: ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.


ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 (2nd PUC Exam 2 Result) ಫಲಿತಾಂಶ ಶುಕ್ರವಾರ (ಮೇ 16) ಸಂಜೆ 5ಕ್ಕೆ ಪ್ರಕಟವಾಗಲಿದೆ. ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು.
ಏ.24 ರಿಂದ ಮೇ 8ರವರೆಗೆ ಪರೀಕ್ಷೆ-2 ನಡೆದಿತ್ತು. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ-2 ಫಲಿತಾಂಶ ಸಿದ್ಧಪಡಿಸಿದೆ.