Karnataka Weather: ಹವಾಮಾನ ವರದಿ; ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭರ್ಜರಿ ಮಳೆ!
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಂಭವ ಇದೆ.


ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶನಿವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ವ್ಯಾಪಕ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 16ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಅದೇ ರೀತಿ ದಕ್ಷಿಣ ಒಳನಾಡಿಗೆ ಜೂನ್ 17ರವರೆಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 19ರವರೆಗೆ ಗಂಟೆಗೆ 65 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಂಭವ ಇದೆ.
ಜೂನ್ 16ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 17ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ವಿಜಯನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರು, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 18ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಯಾದಗಿರಿ, ಕೊಪ್ಪಳ, ರಾಯಚೂರು, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜನಗರ, ಹಾಸನ, ತುಮಕೂರು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 19ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜನಗರ, ಹಾಸನ, ತುಮಕೂರು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ರಾತ್ರಿ ಕಾಡುವ ಕಾಲುನೋವಿಗೇನು ಮದ್ದು?
ಜೂನ್ 20 ಮತ್ತು 21ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಚಾಮರಾಜನಗರ, ಹಾಸನ, ತುಮಕೂರು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.