ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಇಂದಿನ ಹವಾಮಾನ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿಯೊಂದಿಗೆ ಕಿ.ಮೀ.ಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಇಂದಿನ ಹವಾಮಾನ; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

Profile Prabhakara R Jun 23, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka weather) ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿಯೊಂದಿಗೆ ಕಿ.ಮೀ.ಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಇನ್ನು ಜೂನ್‌ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 24ರಂದು ಕರಾವಳಿ ಜಿಲ್ಲೆಗಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 25ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾದ್‌ದಗ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 26ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ನಿಯಮಿತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಜೂನ್‌ 27 ಮತ್ತು 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಹಾವೇರಿ, ಕೊಪ್ಪಳ, ಬೀದರ್, ರಾಯಚೂರು, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.