ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Madhu Bangarappa: ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಮಧು ಬಂಗಾರಪ್ಪ

ಹರೀಶ್‌ ಕೇರ ಹರೀಶ್‌ ಕೇರ Jun 17, 2025 7:07 AM

ಬಳ್ಳಾರಿ: ಈ ಬಾರಿ ಬಜೆಟ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಸರಕಾರಿ ಶಾಲೆಗಳಲ್ಲಿ (Government Schools) ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ (LKG, UKG classes) ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ (Education Minister Madhu Bangarappa) ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ ಮಧು ಬಂಗಾರಪ್ಪ ಅವರು, ಗಡಿಭಾಗದ ಶಾಲೆಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ ಪಡೆದು, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಇದರಿಂದ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುವುದಿಲ್ಲ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯ ರಾಜ್ಯ ಸರ್ಕಾರ ನೀಡಲಿದೆ ಎಂದರು.

ಇದನ್ನೂ ಓದಿ: Face Recognition: ಶಾಲೆಗಳಲ್ಲಿ ಮುಂದಿನ ವರ್ಷದಿಂದ ʼಫೇಸ್‌ ರೆಕಗ್ನಿಷನ್‌ ಹಾಜರಾತಿ ವ್ಯವಸ್ಥೆʼ ಜಾರಿ: ಮಧು ಬಂಗಾರಪ್ಪ