ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Wildlife Sanctuary: ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Bukkapatna Chinkara Wildlife Sanctuary: ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಒತ್ತುವರಿ ತೆರವು

Profile Prabhakara R Jul 4, 2025 4:09 PM

ತುಮಕೂರು: ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಒತ್ತವರಿಯಾಗಿದ್ದ 300 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ (Bukkapatna Chinkara Wildlife Sanctuary) ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ.

ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ.

ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಸಚಿವರು ತಿಳಿಸಿದ್ದಾರೆ.



ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಚಿವರ ಸಾಂತ್ವನ

_Eshwar Khandre

ಬೀದರ್: ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಮಂದಿ ಪ್ರಯಾಣಿಕರಿದ್ದ ಗೂಡ್ಸ್ ವಾಹನ ರಸ್ತೆ ಪಕ್ಕದ ತೆರೆದ ಬಾವಿಗೆ ಬಿದ್ದು ಇಬ್ಬರು ದುರಂತವಾಗಿ ಸಾವಿಗೀಡಾಗಿರುವ ದುಃಖದ ಸುದ್ದಿ ತಿಳಿದು ದುಃಖವಾಗಿದೆ. ಈ ದುರಂತದ ಸ್ಥಳಕ್ಕೆ ನಾನು ಇಂದು ತಕ್ಷಣ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಲಾಗಿದೆ. ಸಾರ್ವಜನಿಕರ ಜೀವ ಸುರಕ್ಷತೆ ಅತ್ಯಂತ ಪ್ರಾಮುಖ್ಯವಿರುವ ಹಿನ್ನೆಲೆಯಲ್ಲಿ, ಅಪಾಯವನ್ನುಂಟುಮಾಡುವ ಎಲ್ಲಾ ತೆರೆದ ಬಾವಿಗಳನ್ನು ತಕ್ಷಣವೇ ಮುಚ್ಚುವಂತೆ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಲಾಗಿದೆ. ಸರ್ಕಾರದ ವತಿಯಿಂದ ಅವರಿಗೆ ಸೂಕ್ತ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಲಾಗಿದೆ ಎಂದು ಹೇಳಿದ್ದಾರೆ.