ತುಮಕೂರಿನಲ್ಲಿ ಅಕ್ರಮ ಗೋಮಾಂಸ ಮಾರಾಟ: ಆರೋಪಿ ಪೊಲೀಸರ ವಶಕ್ಕೆ
Tumkur News: ತುಮಕೂರು ನಗರದ ಸದಾಶಿವನಗರದ 8ನೇ ಕ್ರಾಸ್‌ನಲ್ಲಿರುವ ಶೆಡ್ ಒಂದರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ, ಗೋಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಜರುಗಿದೆ.
ಸಾಂದರ್ಭಿಕ ಚಿತ್ರ. -
ತುಮಕೂರು, ಅ.13: ನಗರದ ಸದಾಶಿವನಗರದ 8ನೇ ಕ್ರಾಸ್‌ನಲ್ಲಿರುವ ಶೆಡ್ ಒಂದರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ, ಗೋಮಾಂಸವನ್ನು ವಶಪಡಿಸಿಕೊಂಡು ನವಾಜ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸದಾಶಿವನಗರದ ನಿರ್ದಿಷ್ಟ ಶೆಡ್‌ನಲ್ಲಿ ನವಾಜ್ ಎಂಬಾತ ಗೋಮಾಂಸ ಮಾರಾಟದಲ್ಲಿ ತೊಡಗಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಎಚ್ಚೆತ್ತ ಕಾರ್ಯಕರ್ತರು ತುರ್ತು ಸಹಾಯವಾಣಿಗೆ (112) ಕರೆ ಮಾಡಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು.
ಮಾಹಿತಿ ಆಧರಿಸಿ ಕೂಡಲೇ ಸ್ಥಳಕ್ಕೆ ಧಾವಿಸಿದ ತಿಲಕ್ ಪಾರ್ಕ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿರುವುದು ದೃಢಪಟ್ಟಿದ್ದು, ಸ್ಥಳದಲ್ಲಿದ್ದ ಗೋಮಾಂಸವನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಆರೋಪಿ ನವಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.