ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಜಾಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

Tumkur News: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಹೆಸರು ಕೇಳಿಬಂದಿದ್ದು, ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂಭಾಗ ಉಗ್ರ ಪ್ರತಿಭಟನೆ ನಡೆಸಿದರು.

ಬಸವರಾಜ್ ಕನ್ನಾಳೆ ವಜಾಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

-

Profile
Siddalinga Swamy Sep 4, 2026 6:36 PM

ತುಮಕೂರು, ಸೆ.04: ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ವಜಾಗೆ ಒತ್ತಾಯಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ (Tumkur News) ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಕಚೇರಿ ಮುಂಭಾಗ ಉಗ್ರ ಪ್ರತಿಭಟನೆ ನಡೆಸಿದರು.

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆ ಹೆಸರು ಕೇಳಿಬಂದಿದ್ದು, ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ಅವರನ್ನು ವಜಾಗೊಳಿಸಬೇಕು ಮತ್ತು ಮುಂಬರುವ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ಮುಂದುವರಿಯುವುದು ವಿಶ್ವವಿದ್ಯಾಲಯದ ಘನತೆಗೆ ಕಳಂಕ ತರಲಿದೆ ಎಂದು ಪ್ರತಿಭಟನಾಕಾರರು ದೂರಿದರು. ಬಸವರಾಜ್ ಕನ್ನಾಳೆ ಅವರನ್ನು ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಮತ್ತು ಮುಂಬರುವ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ತುಮಕೂರು ವಿವಿಯಲ್ಲಿ ಕನ್ನಾಳೆ ಅವರ ಅಧಿಕಾವಧಿಯಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ. ನಾಗಭೂಷಣ್, ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು.

Tumkur News: ಧರ್ಮಸ್ಥಳ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಂಚಾಲಕ ಎಚ್.ಆರ್. ಗುರುಪ್ರಸಾದ್, ಎಬಿವಿಪಿ ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಯಮುನಾ, ತುಮಕೂರು ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್ ಕೆ., ಹಾಗೂ ಪ್ರಮುಖ ಕಾರ್ಯಕರ್ತರಾದ ರಂಗನಾಥ್ ಜೆ.ಬಿ., ಅಪ್ಪು, ಗಣಪತಿ, ಚಿರಂಜೀವಿ, ಪ್ರಶಾಂತ್, ಶರಣ್, ಮನೋಜ್, ಅಭಿಷೇಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.