ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Madhugiri News: ಸಂವಿಧಾನದಿಂದಲೇ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಗೌರವದ ಬದುಕು: ಗೋಟೂರು ಶಿವಪ್ಪ

Constitution Day: ಯಾರೂ ಯಾರಿಗಿಂತಲೂ ಕಡಿಮೆಯಲ್ಲ ಎಂಬ ಆತ್ಮಗೌರವದ ಬದುಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆಯನ್ನು ಓದಿ ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಬಗ್ಗೆ ಹೆಮ್ಮೆ ಮತ್ತು ಗೌರವ ಹೊಂದಬೇಕು ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದ್ದಾರೆ.

ಸಂವಿಧಾನದಿಂದಲೇ ಪ್ರತಿಯೊಬ್ಬರಿಗೂ ಸಮಾನ ಹಕ್ಕು,ಗೌರವದ ಬದುಕು:ಗೋಟೂರು ಶಿವಪ್ಪ

-

Profile
Siddalinga Swamy Nov 26, 2026 5:36 PM

ಮಧುಗಿರಿ, ನ.26: ಸಂವಿಧಾನವು ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನತೆಯ ಭರವಸೆ ನೀಡಿದೆ‌ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು. ಪಟ್ಟಣದ (Madhugiri News) ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾರೂ ಯಾರಿಗಿಂತಲೂ ಕಡಿಮೆಯಲ್ಲ ಎಂಬ ಆತ್ಮಗೌರವದ ಬದುಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆಯನ್ನು ಓದಿ ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಬಗ್ಗೆ ಹೆಮ್ಮೆ ಮತ್ತು ಗೌರವ ಹೊಂದಬೇಕು ಎಂದು ಹೇಳಿದರು.

ತಹಸೀಲ್ದಾರ್ ಎಸ್.ಎ. ನಂದಿನಿ ಮಾತನಾಡಿ, ಸಂವಿಧಾನವು ಜೀವಂತ ಗ್ರಂಥವಾಗಿದ್ದು, ಆಡಳಿತ ವ್ಯವಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರು ಸಂವಿಧಾನವನ್ನು ಕಡ್ಡಾಯವಾಗಿ ಅಧ್ಯಯನ ಮಾಡಬೇಕು. ಪ್ರತಿಯೊಬ್ಬರೂ ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದರು.

ಉಪನ್ಯಾಸಕ ನಾಗರಾಜು ಮಾತನಾಡಿ, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಗೌರವಯುತವಾಗಿ ಬದುಕುವ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಕೀಲ ಐ.ಡಿ. ಹಳ್ಳಿಯ ಬಿ. ನರಸಿಂಹಮೂರ್ತಿ ಮಾತನಾಡಿದರು. ತಾ.ಪಂ.ಇಒ ಉತ್ತಮ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ಶಶಿಕುಮಾರ್, ಜಿ.ಪಂ.ಎಇಇ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದಿನೇಶ್, ದಲಿತಪರ ಸಂಘಟನೆಯ ಪದಾಧಿಕಾರಿಗಳಾದ ದೊಡ್ಡೇರಿ ಕಣಿಮಯ್ಯ, ಚಿಕ್ಕಮ್ಮ, ಮಹರಾಜು, ಎಸ್.ಕೆ. ರಂಗನಾಥ್, ಸಂಜೀವಯ್ಯ, ಜಲಾಲ್ ಬಾಷಾ ಇದ್ದರು.