ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಸ್‌ಐಆರ್‌ ವಿರೋಧಿಸಿ ತುಮಕೂರಿನಲ್ಲಿ ಸೆ. 28ರಂದು ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Tumkur News: ಬಿಜೆಪಿಯನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗವು ಎಸ್.ಐ.ಆರ್. ಪ್ರಕ್ರಿಯೆ ಮೂಲಕ ಬಿಜೆಪಿಯೇತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುತ್ತಿದೆ. ಬಬಲೇಶ್ವರ, ಬೆಳಗಾವಿ ಮತ್ತು ಧಾರವಾಡ ದಕ್ಷಿಣದಲ್ಲಿ ಇದರ ಅಕ್ರಮಗಳು ದಾಖಲೆಗಳ ಮೂಲಕ ಬಹಿರಂಗಗೊಂಡಿವೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಆರೋಪಿಸಿದ್ದಾರೆ.

ಎಸ್‌ಐಆರ್‌ ವಿರೋಧಿಸಿ ತುಮಕೂರಿನಲ್ಲಿ ಸೆ. 28ಕ್ಕೆ ಕಾಂಗ್ರೆಸ್‌ ಪ್ರತಿಭಟನೆ

-

Profile
Siddalinga Swamy Sep 26, 2026 7:06 PM

ತುಮಕೂರು, ಸೆ.26: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಡವರು, ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಅನಕ್ಷರಸ್ಥರ ಮತದಾನದ ಹಕ್ಕನ್ನು ಕಸಿಯಲು ಬಿಜೆಪಿ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಸೆಪ್ಟಂಬರ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದ್ದಾರೆ. (Tumkur News) ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಿಜೆಪಿಯನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗವು ಎಸ್.ಐ.ಆರ್. ಪ್ರಕ್ರಿಯೆ ಮೂಲಕ ಬಿಜೆಪಿಯೇತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುತ್ತಿದೆ. ಬಬಲೇಶ್ವರ, ಬೆಳಗಾವಿ ಮತ್ತು ಧಾರವಾಡ ದಕ್ಷಿಣದಲ್ಲಿ ಇದರ ಅಕ್ರಮಗಳು ದಾಖಲೆಗಳ ಮೂಲಕ ಬಹಿರಂಗಗೊಂಡಿವೆ ಎಂದು ಅವರು ದೂರಿದರು.

ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಎಲ್‌ಒ ಅಥವಾ ಬಿಎಲ್‌ಎ ಅಲ್ಲದವರು ಫಾರಂ ನಂ. 07ರ ಮೂಲಕ 2,500ಕ್ಕೂ ಹೆಚ್ಚು ಮತದಾರರ ಹೆಸರು ಕೈಬಿಡಲು ಅರ್ಜಿ ಸಲ್ಲಿಸಿರುವುದು ಅಕ್ರಮಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಶಾಸಕ ಅಭಯ್ ಪಾಟೀಲ್ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 74,000 ಮತದಾರರ ಹೆಸರುಗಳನ್ನು ಕೈಬಿಡಲಾಗಿದ್ದು, 39,000 ಮತದಾರರಿಗೆ ನೊಟೀಸ್ ನೀಡಲಾಗಿದೆ. ಎಸ್.ಐ.ಆರ್. ಪ್ರಕ್ರಿಯೆಯನ್ನು ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿರುವ ಶಂಕೆ ಇದ್ದು, ಇದರ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಇಕ್ಬಾಲ್ ಅಹಮದ್ ಆಗ್ರಹಿಸಿದರು.

ಬಿ.ಕೆ. ಹರಿಪ್ರಸಾದ್ ಪರ ಬ್ಯಾಟಿಂಗ್

ಕೆಪಿಸಿಸಿ ಅಧ್ಯಕ್ಷರ ಆರೋಪದಿಂದ ಕಂಗೆಟ್ಟಿರುವ ಶಾಸಕ ಅಭಯಪಾಟೀಲ್ ಅವರು ಹರಿಪ್ರಸಾದ್ ಅವರಿಗೆ ಕನ್ನಡ ಬರುವುದಿಲ್ಲ ಎಂದು ಹಗುರವಾಗಿ ಮಾತನಾಡಿರುವುದು ಖಂಡನೀಯ. ಅವರಿಗೆ ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳ ಮೇಲೆ ಪಾಂಡಿತ್ಯವಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ವಾಸುದೇವಮೂರ್ತಿ ತಿರುಗೇಟು ನೀಡಿದರು.

ಹಾಲಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ರಾಮಕೃಷ್ಣಪ್ಪ ಹಾಗೂ ವಿವಿಧ ಮಂಚೂಣಿ ಘಟಕಗಳ ಮುಖಂಡರಾದ ಸೈಯದ್ ದಾದಾಪೀರ್, ಗುರುಪ್ರಸಾದ್, ಅನಿಲ್‌ಕುಮಾರ್, ಭೈಲಸ್ವಾಮಿ, ಸುರೇಶ್‌ರಾಜ್, ಇರ್ಫಾನ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.