Physical Abuse: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್
Physical Abuse: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೇಘನ ಎಂಬಾಕೆ ನೀಡಿದ ದೂರಿನ ಮೇರೆಗೆ ಜೀನಿ ಸಂಸ್ಥೆ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ತುಮಕೂರು: ಜೀನಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ (Physical Abuse) ನೀಡಿರುವ ಆರೋಪದಲ್ಲಿ ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಕಂಪನಿಯಲ್ಲಿ ಕೆಲಸಕ್ಕೆ ಬರುವ ಮೇಘನ ಎಂಬಾಕೆಗೆ ದಿಲೀಪ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮೈ ,ಕೈ ಮುಟ್ಟಿ ಎಳೆದಾಡಿದ್ದಾರೆ. ಬೇಡ ಎಂದು ಬೇಡಿಕೊಂಡರು ಬಿಡದೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದು, ಒಂದು ವೇಳೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ನೊಂದ ಮಹಿಳೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಏ. 24 ರಂದು ಎಫ್‌ಐಆರ್ ದಾಖಲಾಗಿದೆ.
ಈಗಾಗಲೇ ಪ್ರಾಥಮಿಕ ತನಿಖೆ ಮುಗಿಸಿರುವ ಪೊಲೀಸರು, ಸಂತ್ರಸ್ತೆಯನ್ನು ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಕಾರಣ, ಜೀನಿ ಸಂಸ್ಥೆ ಮಾಲೀಕ ದಿಲೀಪ್ ಕುಮಾರ್ ಅವರನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳು ಪೊಲೀಸರು ಮುಂದಾಗಿದ್ದಾರೆ.
ಯಾವುದೇ ಒತ್ತಡಗಳಿಗೆ ಮಣಿಯದೆ ಆರೋಪಿಯನ್ನು ಪೊಲೀಸರು ಬಂಧಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳದಿದ್ದರೆ ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು. ಕಂಪನಿಯಲ್ಲಿ ಕೆಲಸ ಮಾಡುವ ಅನೇಕ ಬಡ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ನೊಂದ ಮಹಿಳೆ ಆಗ್ರಹಿಸಿದ್ದಾರೆ.
ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಜೀನಿ ಮಾಲೀಕ ದಿಲೀಪ್ ಕುಮಾರ್, ಜೀನಿ ಸಂಸ್ಥೆಯ ಬೆಳವಣಿಗೆಯನ್ನು ಸಹಿಸದ ಕೆಲವು ವ್ಯಕ್ತಿಗಳು, ಮಹಿಳೆಯರನ್ನು ಮುಂದಿಟ್ಟುಕೊಂಡು ಕುತಂತ್ರ ನಡೆಸುತ್ತಿದ್ದಾರೆ. ತನ್ನ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Gokarna tragedy: ಗೋಕರ್ಣದಲ್ಲಿ ತಮಿಳುನಾಡಿನ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಮುದ್ರ ಪಾಲು
ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಹೋದರಿ ಎಂದು ಹೇಳಿ ಹಣಕಾಸಿನ ವಂಚನೆ (financial fraud case) ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡಳನ್ನು (Aishwarya Gowda) 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನದ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
9.82 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಗುರುವಾರ (ಏ.24) ರಂದು ದಾಳಿ ನಡೆಸಿದ್ದರು. ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದ್ದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಈ ವೇಳೆ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬಳಿಕ ಐಶ್ವರ್ಯ ಗೌಡ ಅವರ ಆರ್.ಎಂ.ಸಿ. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದ್ದರು. ಹೆಚ್ಚಿನ ವಿಚಾರಣೆಯ ಕಂಡುಬಂದುದರಿಂದ ಐಶ್ವರ್ಯ ಗೌಡಳನ್ನು ವಶಕ್ಕೆ ಪಡೆದುಕೊಂಡು ಕೋರ್ಟ್ ಮುಂದೆ ತಂದಿದ್ದರು.
ಇಡಿ ಅಧಿಕಾರಿಗಳು ಬೆಂಗಳೂರಿನ ಆರ್.ಆರ್.ನಗರದ ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ನಿವಾಸದ ಮೇಲೂ ದಾಳಿ ನಡೆಸಿದ್ದರು. ತಿಬ್ಬೇಗೌಡ ಅವರ ಬ್ಯಾಂಕ್ ಅಕೌಂಟ್ಸ್ ಡೀಟೆಲ್ಸ್, ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ಐಶ್ವರ್ಯ ಗೌಡ ಅವರ ಬೆನ್ಜ್ ಕಾರು ಬಳಸುತ್ತಿದ್ದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಬೆಂಗಳೂರಿನ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಸತತ 28 ಗಂಟೆಗಳ ಕಾಲ ವಿನಯ ಕುಲಕರ್ಣಿ ಅವರ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.