ತುಮಕೂರು ವಿವಿ ಹೊರಗುತ್ತಿಗೆ ನೌಕರರಿಗೆ ಉಚಿತ ನೇತ್ರ ತಪಾಸಣಾ ಶಿಬಿರ
Tumkur News: ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಎಸ್ಟೇಟ್ ವಿಭಾಗದ ವತಿಯಿಂದ ತುಮಕೂರಿನ ಡಾ. ಅಗರ್ ವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಶುಕ್ರವಾರ ತುಮಕೂರು ವಿವಿಯ ಹೊರಗುತ್ತಿಗೆ ನೌಕರರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.
-
ತುಮಕೂರು, ಅ.02: ಇಂದಿನ ಜೀವನಶೈಲಿಯಲ್ಲಿ ಮೊಬೈಲ್, ಕಂಪ್ಯೂಟರ್ ಮತ್ತು ಟಿವಿಯಂತಹ ಡಿಜಿಟಲ್ ಸಾಧನಗಳ ಬಳಕೆ ಹೆಚ್ಚಾಗಿದೆ. ಇದರಿಂದ ಕಣ್ಣಿನ ಆಯಾಸ, ದೃಷ್ಟಿ ಮಂದವಾಗುವುದು, ತಲೆನೋವು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಆದರೆ ಅನೇಕರು ಕಣ್ಣಿನ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಾರೆ. ಕಣ್ಣಿನ ತೊಂದರೆ ಕಾಣಿಸಿಕೊಂಡಾಗ ಮಾತ್ರ ತಪಾಸಣೆ ಮಾಡಿಸುವುದಿಲ್ಲ, ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಡಾ. ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಅಂಟೋನಿ ಅನಿಲ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಎಸ್ಟೇಟ್ ವಿಭಾಗದ ವತಿಯಿಂದ ತುಮಕೂರಿನ ಡಾ. ಅಗರ್ ವಾಲ್ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಶುಕ್ರವಾರ ತುಮಕೂರು ವಿಶ್ವವಿದ್ಯಾನಿಲಯದ ಹೊರಗುತ್ತಿಗೆ ನೌಕರರಿಗಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷವಾಗಿ ಮಕ್ಕಳು, ವಯೋವೃದ್ಧರು, ಹೆಚ್ಚು ಸಮಯ ಕಂಪ್ಯೂಟರ್ ಅಥವಾ ಮೊಬೈಲ್ ಬಳಸುವವರು ಮತ್ತು ಮಧುಮೇಹದಂತಹ ಕಾಯಿಲೆ ಇರುವವರು ನಿಯಮಿತವಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್. ಶ್ರೀನಿವಾಸ್ ಮಾತನಾಡಿ, ಕಣ್ಣಿನ ಆರೋಗ್ಯ ಕಾಪಾಡುವುದು ಎಂದರೆ ನಮ್ಮ ಭವಿಷ್ಯವನ್ನು ಕಾಪಾಡುವುದು. ಎಲ್ಲರೂ ನೇತ್ರ ತಪಾಸಣೆ ಮಾಡಿಸಿಕೊಳ್ಳಿ, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ತುಮಕೂರಿನಲ್ಲಿ ‘ವಿಪ್ರ ಮಹಿಳಾ ಸಂತೆ’ ಗೆ ಅಭೂತಪೂರ್ವ ಸ್ಪಂದನೆ: ಮಹಿಳಾ ಸ್ವಾವಲಂಬನೆಗೆ ಮುನ್ನುಡಿ
ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ದಯಸ್ಪರ್ಶ ಆಸ್ಪತ್ರೆಯ ವ್ಯವಸ್ಥಾಪಕ ಅನಿಲ್ ಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಂಯೋಜಕ ಡಾ. ಸುದೀಪ್ ಕುಮಾರ್, ಎಸ್ಟೇಟ್ ಅಧಿಕಾರಿ ಮಂಜುನಾಥ್, ಉಪನ್ಯಾಸಕ ಡಾ. ವೇಣುಗೋಪಾಲ್ ಜಿ.ಎಸ್. ಉಪಸ್ಥಿತರಿದ್ದರು.