ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Koratagere News: ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

Koratagere News: ಕೊರಟಗೆರೆ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದ್ದಾರೆ.

ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

-

Profile
Siddalinga Swamy Sep 15, 2026 5:30 PM

ಕೊರಟಗೆರೆ, ಸೆ.15: ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯು (Koratagere News) ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡಿ, ಪ್ರತಿ ಚುನಾವಣೆಯಲ್ಲೂ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಹಲವು ಸವಾಲುಗಳು ಎದುರಾಗುತ್ತಿವೆ. ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದಲೇ ನೂತನ ಕಚೇರಿಯನ್ನು ಆರಂಭಿಸಲಾಗಿದೆ. ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದರು.

ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪದವೀಧರರಿಗೆ ಆಗುತ್ತಿರುವ ಅನ್ಯಾಯ ಹಾಗೂ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ. ಪದವೀಧರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕಾದರೆ, ಈ ಬಾರಿ ಪದವೀಧರರು ತಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ನಿರ್ಧಾರ ಕೈಗೊಳ್ಳಬೇಕು. ಪದವೀಧರರ ಪರವಾಗಿ ಕೆಲಸ ಮಾಡುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಮತದಾನದ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

BJP

ಬಿಜೆಪಿ ಮುಖಂಡ ವಿಜಯಕುಮಾರ್ ಮಾತನಾಡಿ, ಕೊರಟಗೆರೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಕಚೇರಿ ಪ್ರಮುಖ ಪಾತ್ರ ವಹಿಸಲಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಂದೇ ವೇದಿಕೆಯಲ್ಲಿ ಸೇರಿ ಸಂಘಟನಾತ್ಮಕ ಚಟುವಟಿಕೆಗಳನ್ನು ರೂಪಿಸಲು ಈ ಕಚೇರಿ ಸಹಕಾರಿಯಾಗಲಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಮತ್ತಷ್ಟು ಸಕ್ರಿಯಗೊಳಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.‌

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು

ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನ ಜನರಿಗೆ ತಿಳಿಸಲು ಹಾಗೂ ಪಕ್ಷದ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಮತದಾರರನ್ನು ತಲುಪುವ ಕುರಿತು ಮುಖಂಡರು ಚರ್ಚಿಸಿದರು.