ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ
Madhugiri News: ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯಬಾರದು. ಆಸಕ್ತಿ ವಹಿಸಿ ಗಣತಿ ನಮೂನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿಯವರೆಗೂ ಸಂಪರ್ಕಕ್ಕೆ ಸಿಗದವರನ್ನು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅವರನ್ನು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಬಿಎಲ್‌ಒಗಳಿಗೆ ಸಲಹೆ ನೀಡಿದ್ದಾರೆ.
-
ಮಧುಗಿರಿ, ಜು.31: ತಾಲೂಕಿನಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದ್ದು ಈವರೆಗೂ ಶೇಕಡಾ 89ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು. ತಾಲೂಕಿನ (Madhugiri News) ಕೊಟಗಾರಲಹಳ್ಳಿ ಗ್ರಾಮಪಂಚಾಯಿತಿಗೆ ಭೇಟಿ ನೀಡಿ ಮತಗಟ್ಟೆ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿ ಅವರು ಮಾತನಾಡಿದರು.
ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯಬಾರದು. ಆಸಕ್ತಿ ವಹಿಸಿ ಗಣತಿ ನಮೂನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿಯವರೆಗೂ ಸಂಪರ್ಕಕ್ಕೆ ಸಿಗದವರನ್ನು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅವರನ್ನು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಎಲ್‌ಒಗಳಿಗೆ ಸಲಹೆ ನೀಡಿದರು.
ಇದೇ ವೇಳೆ ಹೊನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಈ ವರ್ಷದಿಂದ ನೂತನವಾಗಿ ಎಲ್ ಕೆಜಿ ಮತ್ತು ಯುಕೆಜಿ ಆರಂಭವಾಗಿದ್ದು, ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾಹಿತಿ ಕಲೆ ಹಾಕಿದರು.
ನೇಮಕಾತಿ ಪ್ರಕ್ರಿಯೆಗೆ ಕೆಪಿಎಸ್‌ಸಿ, ಕೆಇಎ ಕೈಗೊಂಡ ಕ್ರಮ ಪರಿಶೀಲಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ
ಈ ಸಂದರ್ಭದಲ್ಲಿ ಪಿಡಿಒ ದಯಾನಂದ್, ಗ್ರಾಮ ಆಡಳಿತಾಧಿಕಾರಿ ಪ್ರಸನ್ನಕುಮಾರ್, ಗ್ರಾ.ಪಂ ಮಾಜಿ ಅಧ್ಯಕ್ಷ ನರಸಿಂಹಯ್ಯ, ಪಾಂಡುರಂಗಪ್ಪ, ಬಡಿಗೊಂಡನಹಳ್ಳಿ ದಿನೇಶ್ , ಸೇರಿದಂತೆ ಮತ ಗಟ್ಟೆ ಅಧಿಕಾರಿಗಳಾದ ತಿಮ್ಮಯ್ಯ, ರೂಪಾ ಹಾಗೂ ಗ್ರಾ.ಪಂ ನೌಕರ ವರ್ಗ ಹಾಜರಿದ್ದರು.