ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

National-level award for teachers: ಕೊಬ್ಬರಿ ನಾಡಿನ ಶಿಕ್ಷಕರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

ಆರ್ಯಭಟ ಎಜುಕೇಶನ್ ಟ್ರಸ್ಟ್, ಕರ್ನಾಟಕ ಚೇತನ ಫೌಂಡೇಶನ್,ಧಾರವಾಡ ವತಿಯಿಂದ " ಸಾಧಕರ ಸಮಾಗಮ " ಸಂಭ್ರಮವನ್ನು, ಬೆಂಗಳೂರಿನ ಎನ್.ಆರ್.ಕಾಲೋನಿಯಲ್ಲಿರುವ ಶ್ರೀ ಬಿ.ಎಂ. ಶ್ರೀಕಂಠಯ್ಯ ಪ್ರತಿಷ್ಠಾನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ದೇಶದ ವಿವಿಧ ಕ್ಷೇತ್ರದ ಸಾಧಕರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿಗೆ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೊಬ್ಬರಿ ನಾಡಿನ ಶಿಕ್ಷಕರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

-

Profile
Ashok Nayak Sep 7, 2026 1:27 PM

ತಿಪಟೂರು: ಆರ್ಯಭಟ ಎಜುಕೇಶನ್ ಟ್ರಸ್ಟ್, ಕರ್ನಾಟಕ ಚೇತನ ಫೌಂಡೇಶನ್,ಧಾರವಾಡ ವತಿಯಿಂದ " ಸಾಧಕರ ಸಮಾಗಮ " ಸಂಭ್ರಮವನ್ನು, ಬೆಂಗಳೂರಿನ ಎನ್ ಆರ್ ಕಾಲೋನಿ ಯಲ್ಲಿರುವ ಶ್ರೀ ಬಿ.ಎಂ. ಶ್ರೀಕಂಠಯ್ಯ ಪ್ರತಿಷ್ಠಾನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ದೇಶದ ವಿವಿಧ ಕ್ಷೇತ್ರದ ಸಾಧಕರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ಡಾ.ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಅತ್ಯುತ್ತಮ ಶಿಕ್ಷಣ ಸಂಸ್ಥೆ ಗಳಿಗೆ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Tiptur News: ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026; ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಇದೇ ಸಂದರ್ಭದಲ್ಲಿ ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಶಿಕ್ಷಕಿಯರಾದ ಶ್ರೀಮತಿ ಕುಸುಮ.ಎಚ್.ಆರ್,ಅನ್ನಪೂರ್ಣ, ಲೀಲಾವತಿ,ಜ್ಞಾನಪೂರ್ಣ ಹಾಗೂ ಶಿಕ್ಷಕರಾದ ಶ್ರೀಯುತ ಶಿವಾನಂದ್ ಮತ್ತು ಲೋಕೇಶ್ ರವರಿಗೆ ಡಾ. ಎಸ್.ರಾಧಾಕೃಷ್ಣನ್ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.