Pahalgam Terror Attack: ತುಮಕೂರಿನಲ್ಲಿ ಮೂವರು ಪಾಕಿಸ್ತಾನಿ ಮಹಿಳೆಯರು
Pak women in Tumkur: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಕಳುಹಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಿದೆ. ಅದರಂತೆ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನ ಮೂಲದ ಮಹಿಳೆಯರು ವಾಸವಾಗಿದ್ದು, ಅವರನ್ನು ಮರಳಿ ಪಾಕಿಸ್ತಾನಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ಕುರಿತ ವಿವರ ಇಲ್ಲಿದೆ.


ತುಮಕೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯ (Pahalgam Terror Attack) ನಂತರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಕಳುಹಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಿದೆ. ಅದರಂತೆ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನ ಮೂಲದ ಮಹಿಳೆಯರು ವಾಸವಾಗಿದ್ದು, ಅವರನ್ನು ಮರಳಿ ಪಾಕಿಸ್ತಾನಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಮುಂದಾಗಿದೆ. ನಗರದಲ್ಲಿ ಮೂವರು ಪಾಕಿಸ್ತಾನಿ ಮೂಲದ ಮಹಿಳೆಯರು ಮದುವೆ ನಂತರ ತಮ್ಮ ಪತಿಯ ಮನೆಯಲ್ಲೇ ಪ್ರತ್ಯೇಕವಾಗಿ ವಾಸವಿದ್ದಾರೆ. ಓರ್ವ ಮಹಿಳೆ 1962 ರಲ್ಲಿ ಮದುವೆಯಾಗಿ ಇಲ್ಲಿಗೆ ಬಂದಿದ್ದರು. ಆ ಮಹಿಳೆ ಭಾರತದ ಪ್ರಜೆ ಎಂದು ಕೋರ್ಟ್ ಘೋಷಣೆ ಮಾಡಿದೆ. ಆದರೆ, ಭಾರತ ಸರ್ಕಾರ ಈವರೆಗೂ ಆಕೆಗೆ ಪೌರತ್ವ ನೀಡಿಲ್ಲ.
ಇನ್ನುಳಿದ ಇಬ್ಬರು ಮಹಿಳೆಯರು ಕಳೆದ 10 ವರ್ಷದ ಹಿಂದೆ ಮದುವೆಯಾಗಿ ಬಂದವರು. ಇಬ್ಬರೂ ದೀರ್ಘ ಅವಧಿಯ ವೀಸಾ ಪಡೆದು ಇಲ್ಲಿ ವಾಸವಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | Karnataka Rains: ರಾಜ್ಯದಲ್ಲಿ ಮೇ 1 ರವರೆಗೆ ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!
ನಾಲ್ವರು ಉಗ್ರರನ್ನು ಕಂಡಿದ್ದೇನೆ ಎಂದ ಮಹಿಳೆ; ಕಥುವಾದಲ್ಲಿ ಕಾರ್ಯಾಚರಣೆ ಶುರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಉಗ್ರರ ದಾಳಿ ನಡೆಸಿದೆ. ಪಹಲ್ಗಾಮ್‌ನಲ್ಲಿ (Pahalgam Terror Attack) 26 ಜನರನ್ನು ಕೊಂದ ನಾಲ್ವರು ಶಂಕಿತ ಭಯೋತ್ಪಾದಕರನ್ನು ನೋಡಿರುವುದಾಗಿ ಮಹಿಳೆಯೊಬ್ಬರು ಹೇಳಿದ್ದಾರೆ. ಆಕೆಯ ಹೇಳಿಕೆಯ ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಆರಂಭಿಸಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಸ್ಥಳಕ್ಕೆ ತಲುಪಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಏತನ್ಮಧ್ಯೆ, ಪುಲ್ವಾಮಾ ಮತ್ತು ಬಾರಾಮುಲ್ಲಾದಲ್ಲಿ ಶೋಧ ಮತ್ತು ಕೂಂಬಿಂಗ್ ಕಾರ್ಯಾಚರಣೆಗಳು ನಡೆಯುತ್ತಿವೆ.
ಬಾರಾಮುಲ್ಲಾದ ಪಟ್ಟನ್ ಪ್ರದೇಶದಲ್ಲಿ, ನಿಷೇಧಿತ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಫ್ರಂಟ್ (ಜೆಕೆಎನ್ಎಫ್) ಸಂಘಟನೆಯಿಂದ ಭಾರತ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಶೋಧ ನಡೆಸಲಾಗುತ್ತಿದೆ. ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕೆಡವಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ, ಬಾರಾಮುಲ್ಲಾ ಪೊಲೀಸರು ಶುಕ್ರವಾರ ಪಟ್ಟನ್‌ನಲ್ಲಿರುವ ಗುಲಾಮ್ ಮೊಹಮ್ಮದ್ ಗನೈ ನಿವಾಸದಲ್ಲಿ ಶೋಧ ನಡೆಸಲಾಗಿದೆ. ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ನಡೆಸಲಾದ ಈ ಶೋಧದಲ್ಲಿ, ಜೆಕೆಎನ್‌ಎಫ್‌ಗೆ ಸಂಬಂಧಿಸಿದ ಅಪರಾಧ ಸಾಮಗ್ರಿಗಳು ಪತ್ತೆಯಾಗಿವೆ. ಎಲ್ಲಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಮ್ಮುಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಕಾರ್ಯಾಚರಣೆ ಕೈಗೆತ್ತಿಕೊಂಡಿರುವ ಭಾರತೀಯ ಸೇನೆ ಲಷ್ಕರ್- ತೊಯ್ಬಾ ಉಗ್ರ(Lashkar Terrorists) ಸಂಘಟನೆಯ ಟಾಪ್ ಕಮಾಂಡರ್‌ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಎಲ್‌ಇಟಿಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಅನಂತ್‌ನಾಗ್ ಜಿಲ್ಲೆಯ ಮೂಲದ ಥೋಕರ್ ಮಂಗಳವಾರದ ಪಹಲ್ಗಾಮ್ ಹತ್ಯಾಕಾಂಡದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದರೆ, ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಅನಂತ್‌ನಾಗ್ ಪೊಲೀಸರು ಗುರುವಾರ ಬಿಡುಗಡೆ ಮಾಡಿದ್ದಾರೆ. ಇತರ ಇಬ್ಬರು ಶಂಕಿತರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರ ಬಂಧನಕ್ಕೆ 20 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Pahalgam Terror Attack: ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಿದ್ದು ಏನು ಗೊತ್ತೇ ?