ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಾಲೆಗಳಲ್ಲಿ ಶಿಕ್ಷಕರ ವರ್ತನೆ ಮಕ್ಕಳ ಮೇಲೆ ಪರಿಣಾಮ ಬೀರುತ್ತೆ: ರೇಣುಕಮ್ಮ

Pavagada News: ಶಿಕ್ಷಕರು ಮಕ್ಕಳಿಗೆ ಕೇವಲ ಪಾಠ ಬೋಧಿಸುವುದಷ್ಟೇ ಅಲ್ಲದೆ, ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಪ್ರತಿಯೊಬ್ಬ ಶಿಕ್ಷಕರು ಮಕ್ಕಳೊಂದಿಗೆ ಪ್ರೀತಿ, ತಾಳ್ಮೆ ಮತ್ತು ಗೌರವದಿಂದ ವರ್ತಿಸಬೇಕು ಎಂದು ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರ ವರ್ತನೆ ಮಕ್ಕಳ ಮೇಲೆ ಪರಿಣಾಮ ಬೀರುತ್ತೆ: ರೇಣುಕಮ್ಮ

-

Profile
Siddalinga Swamy Nov 20, 2026 9:34 PM

ಪಾವಗಡ, ನ.20: ಶಾಲೆಗಳಲ್ಲಿ ಶಿಕ್ಷಕರು ಮಕ್ಕಳೊಂದಿಗೆ ನಡೆದುಕೊಳ್ಳುವ ರೀತಿ ಹಾಗೂ ಅವರ ವರ್ತನೆ ಮಕ್ಕಳ ವ್ಯಕ್ತಿತ್ವ, ಶಿಕ್ಷಣ ಮತ್ತು ಭವಿಷ್ಯದ ಮೇಲೆ ಮಹತ್ತರವಾದ ಪರಿಣಾಮ ಬೀರುತ್ತದೆ ಎಂದು ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದರು. ಪಾವಗಡ ಪಟ್ಟಣದ (Pavagada News) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಕೇವಲ ಪಾಠ ಬೋಧಿಸುವುದಷ್ಟೇ ಅಲ್ಲದೆ, ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಪ್ರತಿಯೊಬ್ಬ ಶಿಕ್ಷಕರು ಮಕ್ಕಳೊಂದಿಗೆ ಪ್ರೀತಿ, ತಾಳ್ಮೆ ಮತ್ತು ಗೌರವದಿಂದ ವರ್ತಿಸಬೇಕು. ಶಿಕ್ಷಕರ ನಡೆ-ನುಡಿ ಮಕ್ಕಳ ಜೀವನದಲ್ಲಿ ಮಾದರಿಯಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು. ಅದರಲ್ಲೂ ಮಹಿಳಾ ಶಿಕ್ಷಕಿಯರ ಪಾತ್ರ ವಿಭಿನ್ನವಾಗಿರುತ್ತದೆ ಮನೆ ಹಾಗೂ ಶಾಲೆಯಲ್ಲಿ ಎರಡು ಪಾತ್ರವನ್ನು ನಿಭಾಯಿಸುವ ಕೌಶಲಗಳನ್ನು ಹೊಂದಿರುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಂಘದ ಅಧ್ಯಕ್ಷೆ ದುರ್ಗಮ್ಮ ಹಾಗೂ ಜೂನಿಯರ್ ಕಾಲೇಜ್ ಫೌಡಶಾಲೆಯ ಮುಖ್ಯ ಶಿಕ್ಷಕಿ ಲಕ್ಮಿ ನರಸಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಸರೋಜ ದೇವಿ, ಸುಧಾ ಮೂರ್ತಿ, ಶಿಕ್ಷಕಿ ಸಿದ್ದೇಶ್ವರಿ ಮಾತನಾಡಿದರು.

ಬೆಂಗಳೂರಿನಲ್ಲಿ ಚರಕ ಕೈಮಗ್ಗ ಉತ್ಪಾದನೆಗಳ ಮಾರಾಟ ಮೇಳಕ್ಕೆ ಚಾಲನೆ ನೀಡಿದ ವೂಡೇ ಪಿ. ಕೃಷ್ಣ

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಾಲತಿ, ಖಜಾಂಚಿ ಶಾಂತಕುಮಾರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.