ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tumkur News: ಪ್ರಿಯಕರನ ಜತೆ ಹೆಂಡತಿ ಪರಾರಿಯಾಗಿದ್ದಕ್ಕೆ ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪತ್ನಿ ಪರಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಪತ್ನಿಯು ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿದ್ದಳು. ಇದರಿಂದ ಮನನೊಂದ ಪತಿ ಮಕ್ಕಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಪ್ರಿಯಕರನ ಜತೆ ಹೆಂಡತಿ ಪರಾರಿ; ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಮಕ್ಕಳೊಂದಿಗೆ ಮೃತ ಅರ್ಚಕ ಶಿವಣ್ಣ. -

Prabhakara R
Prabhakara R May 2, 2026 3:33 PM

ಕುಣಿಗಲ್: ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ (Kunigal) ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕ ಶಿವಣ್ಣ (40), ಪುತ್ರರಾದ ಜೀವನ್ (10), ಪ್ರಾಣೇಶ್ (5) ಮೃತರು. ಮಕ್ಕಳನ್ನು ಉಸಿರು ಗಟ್ಟಿಸಿ ಕೊಂದು, ನಂತರ ಶಿವಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಣ್ಣನ ಪತ್ನಿ ಪರಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಆಕೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿದ್ದಳು. ಈ ಸಂಬಂಧ ಶಿವಣ್ಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದ. ಪೊಲೀಸರ ಮಧ್ಯಸ್ಥಿಕೆಯ ನಂತರ ಪತ್ನಿ ಮನೆಗೆ ಮರಳಿ ಬಂದಿದ್ದಳು. ಆದರೆ, ಮರುದಿನವೇ ಶಿವಣ್ಣ ಕೆಲಸಕ್ಕೆ ಹೋದ ಸಮಯ ನೋಡಿಕೊಂಡು, ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣದೊಂದಿಗೆ ಆಕೆ ಮತ್ತೆ ಪಲಾಯನ ಮಾಡಿದ್ದಾಳೆ.

ಪತ್ನಿಯ ಈ ನಡತೆಯಿಂದ ತೀವ್ರವಾಗಿ ಮನನೊಂದ ಶಿವಣ್ಣ, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಸಾವಿನ ಹಾದಿ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.​ ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ( dowry harassment) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು. ಮದುವೆ ಸಂದರ್ಭದಲ್ಲಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಬೈಕ್ ಹಾಗೂ ಚಿನ್ನಾಭರಣಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಪ್ರಸ್ತುತ ಈ ದಂಪತಿಗೆ ಮೂರು ತಿಂಗಳ ಪುಟ್ಟ ಮಗುವಿದೆ.

ಮದುವೆಯಾದ ಕೆಲವು ದಿನಗಳ ನಂತರ ಪತಿ ವಿಕ್ರಂ ಶೇಷ ಹೆಚ್ಚುವರಿ ವರದಕ್ಷಿಣೆ ತರುವಂತೆ ಪತ್ನಿಯ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಹಲವು ಬಾರಿ ವಂದನಾ ಹೇಳಿದ್ದರು. ಈ ಹಿಂದೆ ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನ ನಡೆಸಿ, ಬುದ್ಧಿ ಹೇಳಿ ಕಳುಹಿಸಲಾಗಿತ್ತು. ಆದರೂ ಕಿರುಕುಳ ಮಾತ್ರ ನಿಂತಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಘಟನೆಗೆ ಸಂಬಂಧಿಸಿದಂತೆ ವಂದನಾ ಅವರ ಪೋಷಕರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ವಿಕ್ರಂ ಶೇಷ, ಅತ್ತೆ ಅಮೃತ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹುಳಿಮಾವು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.