ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur News: ತುಮಕೂರಿನಲ್ಲಿ 4 ಅಡಿ ಉದ್ದದ ಕೊಳಕುಮಂಡಲ, 43 ಮರಿಗಳ ರಕ್ಷಣೆ!

Tumkur News: ತುಮಕೂರು ನಗರದ ಕಾರ್ತಿಕ್ ಎಂಬುವರ ಶೆಡ್‌ನಲ್ಲಿ ಕಾಣಿಸಿಕೊಂಡ 4 ಅಡಿ ಉದ್ದದ ಕೊಳಕುಮಂಡಲ ಹಾಗೂ 43 ಮರಿಗಳನ್ನು ರಕ್ಷಣೆ ಮಾಡಲಾಗಿದೆ. ಪೂರ್ವ ಮುಂಗಾರು ಸಮಯದಲ್ಲಿ ಈ ಹಾವುಗಳು ಸಂತಾನೋತ್ಪತಿ ಮಾಡುತ್ತವೆ. ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಉರಗ ತಜ್ಞರು ಸಲಹೆ ನೀಡಿದ್ದಾರೆ.

ತುಮಕೂರಿನಲ್ಲಿ 43 ಕೊಳಕುಮಂಡಲ ಹಾವಿನ ಮರಿಗಳ ರಕ್ಷಣೆ

Profile Prabhakara R May 1, 2025 8:11 PM

ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ (Tumkur News) ನಿವಾಸಿ ಕಾರ್ತಿಕ್ ಅವರ ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಕಾಣಿಸಿಕೊಂಡ 4 ಅಡಿ ಉದ್ದದ ಕೊಳಕುಮಂಡಲ ಹಾಗೂ 43 ಮರಿಗಳನ್ನು ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಈ ಹಾವುಗಳು ನವೆಂಬರ್- ಡಿಸೆಂಬರ್‌ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳು ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೇ ಜೀವಂತ ಮರಿಗಳು ಹೊರಬರುತ್ತವೆ. ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಕತ್ತಲು ಸಮಯದಲ್ಲಿ ಟಾರ್ಚ್ ಬಳಸಿ ಹಾಗೂ ಶೂ ಗಳನ್ನು ಧರಿಸುವ ಮುನ್ನ ಪರೀಕ್ಷಿಸಿ ಎಂದು ಉರಗ ತಜ್ಞರು ತಿಳಿಸಿದ್ದಾರೆ.

ಯಾವುದೇ ರೀತಿಯ ಹಾವುಗಳು ಕಂಡು ಬಂದರೆ ವಾರ್ಕೊ ಸಂಸ್ಥೆಯ ಸಹಾಯವಾಣಿಗೆ 9964519576 ಕರೆಮಾಡಬಹುದು.

ಈ ಸುದ್ದಿಯನ್ನೂ ಓದಿ | Road Accident: ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

ರಾಜ್ಯ ಸರಕಾರದ ಜಾತಿ ಗಣತಿಗೆ ಬೆಲೆ ಇಲ್ಲ: ಸಚಿವ ಸೋಮಣ್ಣ

v somanna

ತುಮಕೂರು: ದೇಶದಲ್ಲಿ ಜಾತಿ ಗಣತಿ ಮಾಡುವ ಅಧಿಕಾರ ಇರುವುದು ಕೇಂದ್ರ ಸರಕಾರಕ್ಕೆ ಮಾತ್ರ. ಹಾಗಾಗಿ ರಾಜ್ಯ ಸರಕಾರದ ಜಾತಿ ಗಣತಿಗೆ ಬೆಲೆ ಇಲ್ಲ. ಈ ಜಾತಿ ಗಣತಿ ವರದಿ ತನ್ನಿಂದ ತಾನಾಗಿಯೇ ನಿಷ್ಕ್ರಿಯವಾಗುತ್ತದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ. ಹಾಗಾಗಿ ಈ ಸರಕಾರದ ಜಾತಿ ಗಣತಿ ಹೊರಟು ಹೋಗಿದೆ. ದೇಶದ ಜಾತಿ ಗಣತಿಯನ್ನು ಕೇಂದ್ರ ಸರಕಾರವೇ ಮಾಡಲಿದೆ ಎಂದು ತಿಳಿಸಿದರು.

ಒಂದು ದೇಶ, ಒಂದು ಚುನಾವಣೆ, ಮಹಿಳಾ ಮೀಸಲಾತಿ ಬಿಲ್, ಜಾತಿ ಗಣತಿ ಇವೆಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಚಿಂತನೆ. ರಾಜ್ಯ ಸರ್ಕಾರ ವಿನಾ ಕಾರಣ ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು ಉತ್ತಮ ಎಂದರು.

ನಮ್ಮದು ಜಾತ್ಯತೀತ ರಾಷ್ಟ್ರ. ಸುಮಾರು ವರ್ಷಗಳಿಂದ ಜಾತಿ ಗಣತಿ ಮಾಡಬೇಕು ಎಂಬ ಕೂಗಿತ್ತು. ಹಾಗಾಗಿ ಈಗ ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್‌ನವರು ಕೇಂದ್ರದಲ್ಲಿ ಇಷ್ಟು ವರ್ಷ ಅಧಿಕಾರದಲ್ಲಿದ್ದರಲ್ಲಾ ಅವರು ಏಕೆ ಜಾತಿ ಗಣತಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ದೇಶದ ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ಮೋದಿಯವರು ಪರಿಹಾರ ಕಂಡುಕೊಂಡಿದ್ದಾರೆ. ಈವರೆಗೆ 25 ಕೋಟಿ ಕುಟುಂಬಗಳನ್ನು ಮೇಲ್ಪಂಕ್ತಿಗೆ ತಂದಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಿಂದ ಮೋದಿ ವಿರುದ್ಧದ ಗಾಯಬ್ ಪೋಸ್ಟ್ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ಸಂಸ್ಕೃತಿ, ಸಂಸ್ಕಾರ ಇಲ್ಲದವರು. ಹಾಗಾಗಿ ಹೀಗೆ ಮಾಡಿದ್ದಾರೆ. ದೇಶದ ಅರಿವಿಲ್ಲದವರಿಗೆ, ಇಂತಹ ಹುಚ್ಚರನ್ನು ಕಟ್ಟಿಕೊಂಡು ನಾವೇನು ಮಾಡಲಿಕ್ಕೂ ಆಗಲ್ಲ. ಹುಚ್ಚ ಆಸ್ಪತ್ರೆಯಲ್ಲಿದ್ದಾವರಾದರೂ ಮೇಲೂ, ಅದಕ್ಕಿಂತ ಕೀಳಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ದೇಶದ ಪ್ರಧಾನಿ ಮೋದಿಯವರನ್ನು ಕಾಂಗ್ರೆಸ್‌ನವರು ಈ ರೀತಿ ಅಪಮಾನ ಮಾಡುವುದು ಸರಿಯಲ್ಲ. ಕಾಂಗ್ರೆಸ್‌ನಲ್ಲಿ ಕೀಳರಿಮೆ ಹೋಗುವ ತನಕ ಅವರು ಉದ್ಧಾರ ಆಗುವುದಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕೇವಲ 10 ವರ್ಷದಲ್ಲಿ ದೇಶವನ್ನು 50 ವರ್ಷ ಮುಂದಕ್ಕೆ ಕೊಂಡೊಯ್ದಿದ್ದಾರೆ. 7 ದಶಕಗಳಿಗೂ ಹೆಚ್ಚು ಕಾಲ ದೇಶವನ್ನಾಳಿದ ಕಾಂಗ್ರೆಸ್‌ನವರು ಏನು ಮಾಡಿದ್ದಾರೆ ಎಂದು ಅವರು ಖಾರವಾಗಿ ಪ್ರಶ್ನಿಸಿದರು.