MLC Ramesh Babu: ಬೆಂಗಳೂರಿನಲ್ಲಿ ಸ್ಪರ್ಧೆಗೆ ಕ್ಷೇತ್ರ ಹುಡುಕಾಟ: ರಾಜಕೀಯ ಭವಿಷ್ಯ ಬಿಚ್ಚಿಟ್ಟ ಎಂಎಲ್‌ಸಿ
"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ,"
-
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು( MLC Ramesh Babu) ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಕ್ಷೇತ್ರ ದ ಶೈಕ್ಷಣಿಕ ಅಭಿವೃದ್ಧಿಗೆ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ," ಎಂದು ತಿಳಿಸಿದರು.
ಇದನ್ನೂ ಓದಿ: Chikkanayakanahalli News: ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ
ಬೆಂಗಳೂರಿನತ್ತ ಚಿತ್ತ: ಇದೇ ವೇಳೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ವಿಷಯ ಹಂಚಿಕೊಂಡ ರಮೇಶಬಾಬು, "ಪ್ರಸ್ತುತ ನಾನು ರಾಜ್ಯ ಮಟ್ಟದ ಪಟ್ಟಣ ಬ್ಯಾಂಕುಗಳ ಮಹಾ ಮಂಡಳದ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಗಳೂರಿನಲ್ಲಿ ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದೇನೆ," ಎಂದು ಬಹಿರಂಗ ಪಡಿಸಿದರು.
ಕ್ಷೇತ್ರದ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಮಟ್ಟದಲ್ಲಿ ಅಗತ್ಯ ಸಹಕಾರ ನೀಡಲು ಸಿದ್ಧನಿದ್ದೇನೆ. ಕುಡಿಯುವ ನೀರಿನ ಯೋಜನೆಗಳ ಕುರಿತು ವಿಧಾನಪರಿಷತ್ತಿನಲ್ಲಿ ಧ್ವನಿ ಎತ್ತಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಿಗೆ ನೇರ ವಾಗಿ ನನ್ನನ್ನು ಸಂಪರ್ಕಿಸಬಹುದು ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಯುಜಿಡಿ ಕಾಮಗಾರಿಯಲ್ಲಿ ಅವ್ಯವಹಾರ: ಪಟ್ಟಣದ ಯುಜಿಡಿ (ಒಳಚರಂಡಿ) ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ರಮೇಶಬಾಬು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಾನೂ 90ರ ದಶಕದ ಪತ್ರಕರ್ತ!
ಸಂವಾದದ ವೇಳೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡ ರಮೇಶಬಾಬು, "ನಾನು ಕೂಡ 90ರ ದಶಕದಲ್ಲಿ ಪತ್ರಕರ್ತನಾಗಿ ಕೆಲಸ ಮಾಡಿದ್ದೇನೆ. ಪತ್ರಕರ್ತರ ಸಮಸ್ಯೆಗಳು ಮತ್ತು ಸವಾಲು ಗಳನ್ನು ಹತ್ತಿರದಿಂದ ಕಂಡಿದ್ದೇನೆ," ಎಂದು ಪತ್ರಿಕೋದ್ಯಮದ ಅನುಭವಗಳನ್ನು ಹಂಚಿಕೊಂಡಿ ದ್ದು ಪತ್ರಕರ್ತರಲ್ಲಿ ಆತ್ಮೀಯತೆ ಮೂಡಿಸಿತು.