ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tumkur News: ಧರ್ಮಸ್ಥಳ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

SKDRDP Tumkur: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಮಲ್ಲಸಂದ್ರ ಡೈರಿ ಆವರಣದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಜರುಗಿತು. ಈ ಕುರಿತ ವಿವರ ಇಲ್ಲಿದೆ.

ಧರ್ಮಸ್ಥಳ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ

-

Profile
Siddalinga Swamy Sep 2, 2026 8:43 PM

ತುಮಕೂರು, ಸೆ.02: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಮಲ್ಲಸಂದ್ರ ಡೈರಿ ಆವರಣದಲ್ಲಿ (Tumkur News) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ತುಮುಲ್ ವ್ಯವಸ್ಥಾಪಕ ನಿರ್ದೇಶಕ ತಿಮ್ಮನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಶುಪಕ್ಷಿಗಳಿಗೆ ಆಶ್ರಯ ಹಾಗೂ ಸಮಸ್ತ ಜೀವರಾಶಿಗಳಿಗೆ ಪರಿಶುದ್ಧ ಪ್ರಾಣವಾಯು ಒದಗಿಸುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಯೋಜನೆ ಕಾರ್ಯನಿರ್ವಹಿಸುತ್ತಿದೆ. ನಮ್ಮ ಒಕ್ಕೂಟದ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಕೃಷಿ ಉಳಿವಿಗಾಗಿ ಕೆರೆ ಪುನಶ್ಚೇತನ, ರೈತಕ್ಷೇತ್ರ ಪಾಠಶಾಲೆ ಹಾಗೂ ಸಾಮಾಜಿಕ ಅರಣ್ಯೀಕರಣದಡಿ ಒಟ್ಟು 350 ಸಸಿಗಳನ್ನು ನಾಟಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

Tumkur

ಹಣಕಾಸು ವ್ಯವಸ್ಥಾಪಕ ವೆಂಕಟೇಶ್, ಧರ್ಮಸ್ಥಳ ಯೋಜನೆಯ ಜನಪರ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

Tiptur News: ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026; ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಸಂದೇಶ್, ಪತ್ರಕರ್ತ ರಂಗನಾಥ ಕೆ. ಹೊನ್ನಮರಡಿ, ಕೃಷಿ ಅಧಿಕಾರಿ ರಾಘವೇಂದ್ರ, ತುಮುಲ್ ಅಧಿಕಾರಿಗಳು, ಸೇವಾ ಪ್ರತಿನಿಧಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.