ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tumkur Accident: ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ವಿದ್ಯಾರ್ಥಿನಿ ಪಾರು; ಇಲ್ಲಿದೆ ಎದೆ ಝಲ್ ಎನಿಸೋ Video!

ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಭೀಕರ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು,ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾರಿ ಹರಿದರೂ ಪವಾಡಸದೃಶ ರೀತಿಯಲ್ಲಿ ಪಾರಾದ ವಿದ್ಯಾರ್ಥಿನಿ; Video

-

Prabhakara R
Prabhakara R Jul 8, 2026 5:19 PM

ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ಭೀಕರ ಅಪಘಾತ (Tumkur Accident) ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ವಿದ್ಯಾರ್ಥಿನಿಗೆ ಡಿಕ್ಕಿಯಾದರೂ ಆಕೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಅತಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಮುಂದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೂ ಹರಿದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿ ಲಾರಿಯ ಕೆಳಗೆ ಸಿಲುಕಿಕೊಂಡಿದ್ದಾಳೆ. ಲಾರಿ ಡಿಕ್ಕಿಯಾದರೂ ಚಕ್ರಗಳು ವಿದ್ಯಾರ್ಥಿನಿಯ ಮೈಮೇಲೆ ಹರಿಯದ ಕಾರಣ ವಾಹನದಡಿ ಸಿಲುಕಿಕೊಂಡಿದ್ದಾಳೆ.



ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಯುವತಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ದೇವರ ನಾಡನ್ನು ನಡುಗಿಸಿದ ಮತ್ತೊಂದು ಭೂಕುಸಿತ; ಟ್ಯಾಂಕರನ್ನು 10 ಅಡಿ ತಳ್ಳಿದ ಭೀಕರ ಪ್ರವಾಹ: ಎದೆ ಝಲ್ಲೆನ್ನಿಸುವ ವಿಡಿಯೊ ಇಲ್ಲಿದೆ

ಅಪಘಾತದ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಬೇಜವಾಬ್ದಾರಿಯಿಂದ ಚಾಲನೆ ಮಾಡಿದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಚಾಲಕನ ನಿರ್ಲಕ್ಷ್ಯವೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ವ್ಹೀಲಿಂಗ್ ಮಾಡಿದ್ದ ಆರು ಮಂದಿ ವಶಕ್ಕೆ; ದ್ವಿಚಕ್ರ ವಾಹನಗಳ ಜಪ್ತಿ

Bengaluru Wheeling

ಬೆಂಗಳೂರು: ಆಂಬ್ಯುಲೆನ್ಸ್​ಗೆ ದಾರಿ ಬಿಡದೆ ವ್ಹೀಲಿಂಗ್ ಮಾಡಿ ಪುಂಡಾಟ ತೋರಿದ್ದ ಆರು ಮಂದಿಯನ್ನು ಯಶವಂತಪುರ ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡು, ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಸಾದೀಕ್ ಪಾಷಾ ಸೇರಿ ನಾಲ್ವರು ಅಪ್ರಾಪ್ತರಾಗಿದ್ದು, ದ್ವಿಚಕ್ರ ವಾಹನ ನೋಂದಣಿ ಸಂಖ್ಯೆ ಆಧರಿಸಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರು ವ್ಹೀಲಿಂಗ್ ಮಾಡಿದ್ದ ಮೂರು ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ. ಸದ್ಯ ಬಿಎನ್​ಎಸ್ ಹಾಗೂ ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



ಜುಲೈ 4ರಂದು ಮಧ್ಯರಾತ್ರಿ 2.30ರ ಸುಮಾರಿಗೆ ಗೊರಗುಂಟೆಪಾಳ್ಯದಿಂದ ಯಶವಂತಪುರಕ್ಕೆ ಮೂರು ಬೈಕ್ ಗಳಲ್ಲಿ ಆರೋಪಿಗಳು ವ್ಹೀಲಿಂಗ್ ಮಾಡಿ ವಾಹನ ಚಲಾಯಿಸಿದ್ದರು. ಹಿಂದೆ ಬರುತ್ತಿದ್ದ ಆಂಬ್ಯುಲೆನ್ಸ್ ದಾರಿ ಬಿಡದೇ ಮೊಂಡಾಟ ತೋರಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸಂಚಾರ ಪೊಲೀಸರು ವಾಹನ ಸವಾರರನ್ನ ಪತ್ತೆ ಹಚ್ಚಿದ್ದಾರೆ. ವ್ಹೀಲಿಂಗ್ ಮಾಡುವಾಗ ಆಂಬ್ಯುಲೆನ್ಸ್ ಬರುತ್ತಿರುವುದು ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸದ್ಯ ವಿಚಾರಣೆ ನಡೆಸಿ ಆರೋಪಿಗಳನ್ನ ಬಿಟ್ಟುಕಳುಹಿಸಲಾಗಿದೆ. ಮೂರು ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.