ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಾನನಷ್ಟ ಮೊಕದ್ದಮೆ: ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ನ್ಯಾಯಾಲಯಕ್ಕೆ ಹಾಜರು

ಕನ್ನಡ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಡಾ.ಪ್ರೇಮಾಕುಮಾರಿ ದಾಖಲಿ ಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ದಂತೆ, ಏಷ್ಯಾನೆಟ್-ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಚಿಕ್ಕನಾಯಕನಹಳ್ಳಿ ಇಲ್ಲಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದ ಮುಂದೆ ಹಾಜರಾದರು

ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ನ್ಯಾಯಾಲಯಕ್ಕೆ ಹಾಜರು

Profile Ashok Nayak May 24, 2025 1:45 PM

ಚಿಕ್ಕನಾಯಕನಹಳ್ಳಿ: ಕನ್ನಡ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಡಾ.ಪ್ರೇಮಾಕುಮಾರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ದಂತೆ, ಏಷ್ಯಾನೆಟ್-ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಚಿಕ್ಕನಾಯಕನಹಳ್ಳಿ ಇಲ್ಲಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ (JMFC) ನ್ಯಾಯಾಲಯದ ಮುಂದೆ ಹಾಜರಾದರು. 2015ರಲ್ಲಿ ನ್ಯಾಯಾಲಯ ಹೊರಡಿಸಿದ್ದ ವಾರಂಟ್‌ಗೆ ಪ್ರತಿಕ್ರಿಯೆಯಾಗಿ ಅಜಿತ್ ಹನುಮಕ್ಕನವರ್ ಅವರು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶ್ರೀನಾಥ್ ಅವರ ಮುಂದೆ ಹಾಜರಾಗಿದ್ದಾರೆ.

ಇದನ್ನೂ ಓದಿ: Chikkanayakanahalli News: ಒಳ ಮೀಸಲಾತಿ ಸಮೀಕ್ಷೆ ಕಾಲಾವಕಾಶ ಹೆಚ್ಚಿಸಿ : ಛಲವಾದಿ ಮಹಾಸಭಾ ಒತ್ತಾಯ

ಅವರ ಹಾಜರಾತಿಯನ್ನು ದಾಖಲಿಸಿಕೊಂಡ ನಂತರ, ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದರು. ಅಜಿತ್ ಅವರು ಈಗಾಗಲೇ, 2 ಲಕ್ಷ ರೂ. ಮೊತ್ತದ ಬಾಂಡ್ ಮತ್ತು ಸಮಾನ ಮೊತ್ತಕ್ಕೆ ಶ್ಯೂರಿಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.