ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಕಾಯಕ ಕಣ್ಮಣಿ ಪ್ರಶಸ್ತಿ
ಗಣಿನಾಡು ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬೆಳಕು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮ್ಮೇಳನದಲ್ಲಿ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ ಶಿಕ್ಷಕಿ ಹಾಗೂ ಸಾಹಿತಿ ಗೀತಾ ಲೋಕೇಶ್ ಅವರಿಗೆ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
-
Ashok Nayak
May 13, 2026 12:21 AM
ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಗೀತಾ ಲೋಕೇಶ್ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗಣಿನಾಡು ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬೆಳಕು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮ್ಮೇಳನದಲ್ಲಿ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ ಶಿಕ್ಷಕಿ ಹಾಗೂ ಸಾಹಿತಿ ಗೀತಾ ಲೋಕೇಶ್ ಅವರಿಗೆ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರ ಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಅಣ್ಣಪ್ಪ ಮೇಟಿಗೌಡ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಗೀತಾ ಲೋಕೇಶ್ ಅವರ ಈ ಸಾಧನೆಗೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಸೇರಿದಂತೆ ಎಲ್ಲಾ ಶಿಕ್ಷಕರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.