ಸ್ವಗ್ರಾಮ ಹನುಮಂತನಹಳ್ಳಿಯಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ; ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ದರ್ಶನ
Former Minister Venkataramanappa: ಪಾವಗಡ ತಾಲೂಕಿನ ಹನುಮಂತನಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರಗಳೊಂದಿಗೆ ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುಖಂಡ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ರಾಜಕೀಯ ಗಣ್ಯರು, ಸಾರ್ವಜನಿಕರು, ಅಭಿಮಾನಿಗಳು ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.
ಮಾಜಿ ಸಚಿವ ವೆಂಕಟರಮಣಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ. -
ಪಾವಗಡ, ಮೇ 30: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುಖಂಡ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮವಾದ ಹನುಮಂತನಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರಗಳೊಂದಿಗೆ ಭಾರೀ ಜನಸ್ತೋಮದ ನಡುವೆ ಶನಿವಾರ ನೆರವೇರಿತು. ರಾಜಕೀಯ ಗಣ್ಯರು, ಸಾರ್ವಜನಿಕರು, ಅಭಿಮಾನಿಗಳು ಸೇರಿ ಸಾವಿರಾರು ಮಂದಿ ಆಗಮಿಸಿ ಮಾಜಿ ಸಚಿವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಅಂತ್ಯಕ್ರಿಯೆಯಲ್ಲಿ ರಾಜ್ಯದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜರ್ಜ್ ವಸತಿ ಸಚಿವ B. Z. ಜಮೀರ್ ಖಾನ್, ಶಾಸಕ ಯತಿಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎನ್. ರಾಜಣ್ಣ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಸಂಸದ ಜನರ್ಧನ್ ಸ್ವಾಮಿ. ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ಶಾಸಕ ನಾರಾಯಣಸ್ವಾಮಿ, ಆಂಧ್ರ ಪ್ರದೇಶದ ಶಾಸಕಿ ಪರಿಟಾಲ ಸುನಿತಾ ಹಾಗೂ ಮಾಜಿ ಸಚಿವ ರಘವೀರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಂಗಾಮಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, ಮೃತ ಮಾಜಿ ಸಚಿವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಶಾಸಕ ವೆಂಕಟೇಶ ಅವರಿಗೆ ಧೈರ್ಯ ತುಂಬಿದರು.