ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ತುಮಕೂರು ಕೋರ್ಟ್

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನ ಭಾವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸಂಬಂಧ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಅಪರಾಧಿ ಧನಂಜಯನಿಗೆ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಸಾಂದರ್ಭಿಕ ಚಿತ್ರ. -

Profile
Siddalinga Swamy Mar 30, 2026 11:01 PM

ಚಿಕ್ಕನಾಯಕನಹಳ್ಳಿ, ಮಾ.30: ತಾಲೂಕಿನ (Chikkanayakanahalli News) ಭಾವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಪರಾಧಿ ಧನಂಜಯನಿಗೆ ತುಮಕೂರಿನ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶ ಪ್ರಕಾಶ್ ಸಂಗಪ್ಪ ಹೆಳವರ ಅವರು ತೀರ್ಪು ಪ್ರಕಟಿಸಿದ್ದು, ಆರೋಪಿಯ ವಿರುದ್ಧದ ಮೊಕದ್ದಮೆ ರುಜುವಾತಾಗಿದೆ ಎಂದು ಘೋಷಿಸಿ, ಪೋಕ್ಸೊ ಕಾಯ್ದೆ ಸೆಕ್ಷನ್ 8 ರ ಅಡಿಯಲ್ಲಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಇದರೊಂದಿಗೆ ನೊಂದ ಬಾಲಕಿಗೆ ಹೆಚ್ಚುವರಿ ಪರಿಹಾರವಾಗಿ 4 ಲಕ್ಷ ರೂಪಾಯಿ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌; ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್

ಪ್ರಕರಣದ ಹಿನ್ನೆಲೆ

ತುಮಕೂರಿನ ಸತ್ಯಮಂಗಲ ನಿವಾಸಿಯಾದ ಆರೋಪಿ ಧನಂಜಯನು ರಜಾ ದಿನಗಳಲ್ಲಿ ಬಾಲಕಿಯ ಮನೆಗೆ ಹೋಗಿ ಬರುತ್ತಾ ಸಲುಗೆ ಬೆಳೆಸಿಕೊಂಡಿದ್ದನು. 2023ರಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದರಿಂದ ಬಾಲಕಿ ಗರ್ಭಿಣಿಯಾಗಿ ಆಗಸ್ಟ್ 15, 2023ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು.‌

ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃತ್ತ ಪೊಲೀಸ್ ಅಧಿಕಾರಿ ಎಫ್.ಕೆ. ನದಾಫ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹಣಮಂತರಾಯ ತಳಕೇರಿ ಅವರು ದೃಢವಾದ ವಾದ ಮಂಡಿಸಿದ್ದರು.