Drowned: ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು
Tumkur news: 15 ಜನ ಬೈಕ್ ಹಾಗೂ ಓಮಿನಿಯಲ್ಲಿ ಮಾಗಡಿ ಪಾಳ್ಯದಲ್ಲಿರುವ ಅಮೃತೂರು ಠಾಣೆ ಎಎಸ್‍ಐ ಜಿಲಾನಿ ಅವರ ಮನೆಗೆ ಬಂದಿದ್ದರು. ಅಲ್ಲಿ ಊಟ ಮುಗಿಸಿ ಮಾರ್ಕೊನಹಳ್ಳಿ ಡ್ಯಾಂಗೆ ತೆರಳಿದ್ದರು. ಇದರಲ್ಲಿ 12 ಜನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ 6 ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

-

ತುಮಕೂರು: ಜಿಲ್ಲೆಯ ಕುಣಿಗಲ್‌ನಲ್ಲಿರುವ (Tumkur news) ಮಾರ್ಕೊನಹಳ್ಳಿ ಡ್ಯಾಂ (Markonahalli Dam) ಹಿನ್ನೀರಿನಲ್ಲಿ 6 ಮಂದಿ ಕೊಚ್ಚಿ (Drowned) ಹೋಗಿದ್ದಾರೆ. ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. 15 ಜನ ಬೈಕ್ ಹಾಗೂ ಓಮಿನಿಯಲ್ಲಿ ಮಾಗಡಿ ಪಾಳ್ಯದಲ್ಲಿರುವ ಅಮೃತೂರು ಠಾಣೆ ಎಎಸ್‍ಐ ಜಿಲಾನಿ ಅವರ ಮನೆಗೆ ಬಂದಿದ್ದರು. ಅಲ್ಲಿ ಊಟ ಮುಗಿಸಿ ಮಾರ್ಕೊನಹಳ್ಳಿ ಡ್ಯಾಂಗೆ ತೆರಳಿದ್ದರು. ಇದರಲ್ಲಿ 12 ಜನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ 6 ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.
ಮೃತರನ್ನು ತುಮಕೂರು ನಗರದ ತಬಸಮ್ (42), ಶಬಾನಾ (44), ಮಿಶ್ರಾ (4), ಮಹಿಬ್ (ಈ ನಾಲ್ವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ), ಶಾಜಿಯಾ (25), ಅರ್ಬಿನ್ (30) (ಈ ಇಬ್ಬರ ಶವಗಳು ಪತ್ತೆಯಾಗಿದೆ) ಎಂದು ಗುರುತಿಸಲಾಗಿದೆ. ಈ ಅವಘಡದಲ್ಲಿ ನವಾಜ್ (22) ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ರಜೆ ನಿಮಿತ್ತ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ: Drowned: ಕಾಂತಾರ ಸಿನಿಮಾ ಟಿಕೆಟ್ ಸಿಗದೆ ಈಜಲು ಹೋದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವು
ಎಎಸ್ ಪಿ ಗೋಪಾಲ್, ಪುರುಷೋತ್ತಮ್, ಕುಣಿಗಲ್ ಡಿವೈಎಸ್ ಪಿ ಓಂ ಪ್ರಕಾಶ್, ಹಾಗೂ ಅಮೃತೂರು ಪಿಎಸ್ಐ ಶಮಂತ್ ಗೌಡ, ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು
ಬೆಂಗಳೂರು: ನಗರದಲ್ಲಿ ಬೃಹತ್ ಮರದ ಕೊಂಬೆ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ (Bengaluru News) ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆಯ ಬಳಿ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ವಿದ್ಯಾರ್ಥಿನಿ.
ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಭಾಸ್ಕರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮರ ಬಿದ್ದ ತಕ್ಷಣ ಕೊಂಬೆಗಳನ್ನು ತೆರವು ಮಾಡಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವತಿ ಮೃತಪಟ್ಟ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಪೊಷಕರು ದೌಡಾಯಿಸಿದ್ದಾರೆ. ಈ ವೇಳೆ ಅವರ ಆಕ್ರಂದನ ಮುಗಿಲು ಮುಟ್ಟಿದೆ.