ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Media Fest: ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

Tumkur News: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಜೂ.26 ಹಾಗೂ 27ರಂದು ‘ಇಂಪ್ರೆಶನ್-2025’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ತುಮಕೂರು ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

Profile Siddalinga Swamy Jun 11, 2025 6:40 PM

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಜೂ.26 ಹಾಗೂ 27ರಂದು ‘ಇಂಪ್ರೆಶನ್-2025’ (Impression-2025) ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು (Media Fest) ನಗರದ ತುಮಕೂರು ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಧ್ಯಮ ಹಬ್ಬದ ಭಿತ್ತಿಪತ್ರವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಯ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅವರು, ಕೌಶಲಗಳೇ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಕಾಲವಿದು. ಪತ್ರಿಕೋದ್ಯಮ ವಿಭಾಗ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬವು ಯುವಜನರನ್ನು ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧಪಡಿಸುವಲ್ಲಿ ಉತ್ತಮ ವೇದಿಕೆಯಾಗಲಿ ಎಂದು ಹಾರೈಸಿದರು.

ವಿಭಾಗದ ಸಂಯೋಜಕ ಡಾ. ಸಿಬಂತಿ ಪದ್ಮನಾಭ ಕೆ. ವಿ. ಮಾತನಾಡಿ, ಮಾಧ್ಯಮ ಹಬ್ಬವು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ಅವಕಾಶ ಒದಗಿಸಲಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಕಲೆ, ವಾಣಿಜ್ಯ, ವಿಜ್ಞಾನ ವಿಷಯಗಳನ್ನೊಳಗೊಂಡಂತೆ ಎಲ್ಲ ಹಿನ್ನೆಲೆಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ ಎಂದರು.

ಮಾಧ್ಯಮ ಹಬ್ಬದ ಅಂಗವಾಗಿ ವರದಿಗಾರಿಕೆ, ಟಿವಿ ಸುದ್ದಿ ಪ್ರಸ್ತುತಿ, ರೇಡಿಯೋ ಜಾಕಿ, ಛಾಯಾಗ್ರಹಣ, ಪೋಸ್ಟರ್ ವಿನ್ಯಾಸ, ಪುಟ್ಟಕಥೆ, ರೀಲ್ಸ್ ತಯಾರಿ, ಪೀಸ್ ಟು ಕ್ಯಾಮೆರಾ, ಚರ್ಚಾಸ್ಪರ್ಧೆ, ರಸಪ್ರಶ್ನೆ, ಜಾಹೀರಾತು ನಿರ್ಮಾಣ, ಸಮೂಹ ನೃತ್ಯ ಸ್ಪರ್ಧೆಗಳು ನಡೆಯಲಿದ್ದು, ವಿಜೇತ ವಿದ್ಯಾರ್ಥಿಗಳು ಆಕರ್ಷಕ ನಗದು ಬಹುಮಾನ ಪಡೆಯಲಿದ್ದಾರೆ. ಮಾಧ್ಯಮ ಹಬ್ಬದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಊಟೋಪಚಾರ ಸೌಲಭ್ಯಗಳಿವೆ. ಸ್ಪರ್ಧೆಯ ವಿವರ ಹಾಗೂ ನೋಂದಣಿಗಾಗಿ ಮೊಬೈಲ್ ಸಂಖ್ಯೆ 9449525854 ಅಥವಾ 9380750972 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.‌

ಈ ಸುದ್ದಿಯನ್ನೂ ಓದಿ | Monsoon Shopping Styling Tips: ಮಾನ್ಸೂನ್ ಸೀಸನ್ ಶಾಪಿಂಗ್ ಸ್ಟೈಲಿಂಗ್‌ಗೆ ಇಲ್ಲಿದೆ 5 ಐಡಿಯಾ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ಡಾ. ಪೃಥ್ವಿರಾಜ ಟಿ., ವಿನಯ್ ಕುಮಾರ್ ಎಸ್.ಎಸ್., ಡಾ. ಜಿ. ಗಿರಿಜಮ್ಮ, ಹರೀಶ್ ಕುಮಾರ್ ಬಿ.ಸಿ., ಕಮಲಮ್ಮ ಎಸ್., ವಿಶಾಲ್ ಮಯೂರ್ ಹಾಗೂ ಚನ್ನಬಸವ ಎಂ. ಪೋಸ್ಟರ್ ಬಿಡುಗಡೆ ಸಂದರ್ಭ ಉಪಸ್ಥಿತರಿದ್ದರು.