Drowned: ಹಬ್ಬದ ದಿನವೇ ದುರಂತ, ಕೆರೆಯಲ್ಲಿ ಮುಳುಗಿ ಮೂವರ ಸಾವು
Tumkur news: ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಮುಳುಗಿ ಸಾವಿಗೀಡಾಗಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-

ತುಮಕೂರು : ರಾಜ್ಯದಲ್ಲಿ ದೀಪಾವಳಿ (Deepavali) ಹಬ್ಬದ ದಿನವೇ ಘೋರ ದುರಂತವೊಂದು (Tragedy) ಸಂಭವಿಸಿದ್ದು, ಕೆರೆಗೆ ಕಾಲು ಜಾರಿ ಬಿದ್ದು ಮುಳುಗಿ (Drowned) ಮೂವರು ಮೃತಪಟ್ಟಿರುವ ಘಟನೆ ತುಮಕೂರು (Tumkur news) ಜಿಲ್ಲೆ ಅಂದನಕೆರೆ ಬಳಿಯ ಎರೆಕಟ್ಟೆ ಕೆರೆಯಲ್ಲಿ ನಡೆದಿದೆ. ಇಬ್ಬರು ಸ್ನೇಹಿತೆಯರು ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಬಾಲಕಿಯ ತಂದೆ ಕೂಡ ಸಾವನ್ನಪ್ಪಿದ್ದಾರೆ. ವೆಂಕಟೇಶ್ (48), ಪುತ್ರಿ ಶ್ರಾವ್ಯ (12) ಆಕೆಯ ಸ್ನೇಹಿತೆ ಪುಣ್ಯ (11) ಮೃತಪಟ್ಟವರು.
ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಮುಳುಗಿ ಸಾವಿಗೀಡಾಗಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಲಿವಿಂಗ್ ಟುಗೆದರ್‌ನಲ್ಲಿದ್ದ (Living togethar) ಜೋಡಿಯೊಂದು (Couple) ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Fire: ವಸತಿ ಕಟ್ಟಡದಲ್ಲಿ ಬೆಂಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ
ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.