V Somanna: ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣ; ಸರ್ಕಾರಕ್ಕೆ ಸೋಮಣ್ಣ ಪತ್ರ
ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಶಿವಕುಮಾರ ಸ್ವಾಮೀಜಿ (Shivakumar Swamiji) ಹೆಸರು ಮರು ನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಶಿವಕುಮಾರ ಸ್ವಾಮೀಜಿ (Shivakumar Swamiji) ಹೆಸರು ಮರು ನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಹಲವು ದಿನಗಳಿಂದ ತುಮಕೂರಿನಾದ್ಯಂತ ಈ ಕೂಗು ಕೇಳಿಬರುತ್ತಿತ್ತು. ಇದೀಗ ಕೇಂದ್ರ ಸಚಿವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ರತ್ನ, ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರು ಎಂದೆನಿಸಿದ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬರುವ ಎಲ್ಲಾ ವರ್ಗದ ಸಹಸ್ರಾರು ಕುಟುಂಬಗಳಿಗೆ ನೆರವಾಗಿ ಉಚಿತ ಶಿಕ್ಷಣ, ವಸತಿ ಮತ್ತು ದಾಸೋಹ ಕಲ್ಪಿಸುವುದರೊಂದಿಗೆ ಅವರೆಲ್ಲರೂ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕಾರಣೀಭೂತರಾಗಿದ್ದಾರೆ. ಇಂತಹ ಶ್ರೇಷ್ಠ ಸಂತರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವುದರ ಮೂಲಕ ಪೂಜ್ಯರಿಗೆ ಗೌರವ ಸಲ್ಲಿಸಬೇಕಾಗಿದೆ.
ಆದುದರಿಂದ ತಾವುಗಳು ದಯಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ “ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ” ವಿಶ್ವವಿದ್ಯಾಲಯ ಎಂದಯ ಮರುನಾಮಕರಣ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತುಮಕೂರು ಜಿಲ್ಲೆಯ ಮಹಾಜನತೆಯ ಪರವಾಗಿ ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಪತ್ರ ಬರೆದಿದ್ದಾರೆ.
ಈ ಸುದ್ದಿಯನ್ನೂ ಓದಿ: ಮಾನವೀಯತೆ ಮೆರೆದ ಕೊರಟಗೆರೆ ಪಿಎಸೈ: ತುಮಕೂರು-ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ
ಚುನಾವಣಾ ರಾಜಕೀಯದಿಂದ ನಿವೃತ್ತಿ?
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತುಗಳನ್ನು ಆಡಿದ್ದಾರೆ. “ದೇವರೇ ಬಂದು ಮತ್ತೆ ಚುನಾವಣೆಗೆ ನಿಲ್ಲು ಅಂದ್ರೂ ಕೇಳಲ್ಲ. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲ್ವೆ ಮಾರ್ಗಕ್ಕೆ ಸರ್ವೆ ಆಯ್ತು, DPR ಶುರು ಮಾಡಿಸಿದ್ದೇನೆ. ಇನ್ನೊಂದು ಐವತ್ತು ವರ್ಷಕ್ಕೆ ತೊಂದರೆಯಾಗಬಾರದು. ನಾನು ಇನ್ನು 50 ವರ್ಷ ಇರ್ತೀನೇನಪ್ಪ? ದೇವರೇ ಬಂದು ಮತ್ತೆ ಚುನಾವಣೆಗೆ ನಿಲ್ಲು ಅಂದ್ರೂ ಕೇಳಲ್ಲ. ನನ್ನ ಭಾವನೆ ಹಾಗಿದೆ ಎಂದು ನಿವೃತ್ತಿಯ ಮಾತುಗಳನ್ನು ಆಡಿದ್ದಾರೆ.