ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Koratagere Accident: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ

Koratagere News: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲದ ಬಸ್‌ ನಿಲ್ದಾಣದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತ ನಡೆದಿದೆ. ಗೊಬ್ಬರ ತುಂಬಿದ ಲಾರಿ ಬ್ರೇಕ್ ಫೇಲ್ಯೂರ್ ಆಗಿ, ಬೇಕರಿಗೆ ನುಗ್ಗಿದ ಪರಿಣಾಮ, ಬೇಕರಿ ಮುಂಭಾಗ ಎಲೆ ಹಾಗೂ ಬಳೆ ಮಾರುತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಇಬ್ಬರ ದುರ್ಮರಣ

Prabhakara R Prabhakara R Jul 22, 2025 4:01 PM

ಕೊರಟಗೆರೆ: ಗೊಬ್ಬರ ತುಂಬಿದ ಲಾರಿ ಬೇಕರಿಗೆ ನುಗ್ಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ಕೊರಟಗೆರೆ ತಾಲೂಕಿನ (Koratagere Accident) ಕೋಳಾಲದ ಬಸ್‌ ನಿಲ್ದಾಣದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಕೋಳಾಲ ಪೊಲೀಸ್ ಠಾಣೆ ಕಡೆಯಿಂದ ಬರುತ್ತಿದ್ದ ಗೊಬ್ಬರ ತುಂಬಿದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಕೋಳಾಲ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿರುವ ಬೈರವೇಶ್ವರ ಬೇಕರಿಗೆ ನುಗ್ಗಿದ ಪರಿಣಾಮ, ಬೇಕರಿ ಮುಂಭಾಗ ಎಲೆ ಹಾಗೂ ಬಳೆ ಮಾರುತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಕರಿಗೆ ಬಂದಿದ್ದ ಟಿಪಿ ಮಾಜಿ ಸದಸ್ಯೆ ಸಿದ್ದಗಂಗಮ್ಮ, ಕಾಂತರಾಜು, ಜಯಣ್ಣ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಬೇಕರಿ ಮಾಲಿಕ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಅನಿಲ್, ಕೋಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಯೋಗೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: ಪರಸ್ತ್ರೀ ಸಂಬಂಧ ಹೊಂದಿದ್ದ ಪತಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪತ್ನಿ

ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದಿದ್ದಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್‌!

Kolar News (2)

ಕೋಲಾರ: ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಬೆದರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಬಾಸುಂಡೆ ಬರುವಂತೆ ವಾರ್ಡನ್‌ ಹೊಡೆದಿರುವ ಘಟನೆ ಜಿಲ್ಲೆಯ (Kolar News) ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಯನ್ನು ವಾರ್ಡನ್ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದು, ಈ ಕುರಿತು ವಾರ್ಡನ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಮೂರಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದ ಸೋಮವಾರ ಪೋಷಕರ ಸಭೆ ವೇಳೆ ಬೆಳಕಿಗೆ ಬಂದಿದೆ.

ವಿಷಯ ತಿಳಿದು ನೂರಾರು ಮಂದಿ ವಸತಿ ಶಾಲೆ ಬಳಿ ಜಮಾಯಿಸಿದ್ದರು. ಸ್ಥಳಕ್ಕೆ ಬಂದ ನಂಗಲಿ ಪೊಲೀಸರು ಜನರನ್ನು ಚದುರಿಸಿದರು. ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

6ನೇ ತರಗತಿ ವಿದ್ಯಾರ್ಥಿ ಎಸ್.ಅನಂತಪುರ ಗ್ರಾಮದ ಅಂಜನ್ ಕುಮಾರ್ ಮೇಲೆ ವಾರ್ಡನ್ ಮಹೇಶ್ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿ ತಾಯಿ ಅಶ್ವಿನಿ ಆರೋಪ ಮಾಡಿದ್ದಾರೆ. ಮೂಲತಃ ಕೋಲಾರ ತಾಲೂಕಿನ ಸೂಲೂರು ಗ್ರಾಮದ ಈ ವಿದ್ಯಾರ್ಥಿಯ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು. ನಂತರ ಆತ ತಾಯಿಯ ತವರೂರು ಎಸ್.ಅನಂತಪುರಕ್ಕೆ ತೆರಳಿದ್ದ. ಅಲ್ಲಿನ ಮೊರಾರ್ಜಿ ಶಾಲೆಯಲ್ಲಿ ಓದುತ್ತಿದ್ದ.

ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಕುಮಾರ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು. ಹೀಗಾಗಿ ಹೊಡೆದಿರುವುದಾಗಿ ವಾರ್ಡನ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

'ಮಕ್ಕಳು ತುಂಟಾಟ ಮಾಡುವುದು ಸಹಜ. ಬುದ್ಧಿವಾದ ಹೇಳಬೇಕಾದ ವಾರ್ಡನ್ ತಮ್ಮ ಸೊಂಟದ ಬೆಲ್ಟ್ ತೆಗೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಜರ್ಜರಿತಗೊಂಡ ಮಗ ಸ್ಥಳದಲ್ಲೇ ಕುಸಿದು ಬಿದ್ದ ನಂತರವೂ ವಾರ್ಡನ್ ಒದ್ದಿದ್ದಾರೆ ಎಂದು ವಿದ್ಯಾರ್ಥಿ ತಾಯಿ ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Self Harming: ಮಂಡ್ಯದ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಅಂಜನ್ ಕುಮಾ‌ರ್ ಮೇಲೆ ತಾನು ನಡೆಸಿದ ಹಲ್ಲೆ ವಿಷಯವನ್ನು ಯಾರಿಗೂ ತಿಳಿಸಬಾರದು ಎಂದು ವಾರ್ಡನ್ ಇತರ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಈ ಘಟನೆ ನಡೆದು ಮೂರ್ನಾಲ್ಕು ದಿನಗಳಾದರೂ ಯಾರಿಗೂ ಗೊತ್ತಿರಲಿಲ್ಲ ಎಂದು ಅಂಜನ್ ಕುಮಾರ್ ತಾಯಿ ಹೇಳಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ವಾರ್ಡನ್‌ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.