ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vaikuntha Ekadashi: ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ. ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ

ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

-

Ashok Nayak
Ashok Nayak Dec 28, 2025 10:57 PM

ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ಡಿ.30ರಂದು ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ದರ್ಶನ ಅದ್ದೂರಿಯಾಗಿ ನಡೆಯಲಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ.

ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ.

ಇದನ್ನೂ ಓದಿ: Gubbi News: ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಸಾರಥ್ಯ ವಹಿಸಿದ ಬಲರಾಮಣ್ಣ

ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನ ಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.