ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Women's Kannada Rajyotsava: ಡಿ.23 ರಂದು ಮಹಿಳಾ ಕನ್ನಡ ರಾಜ್ಯೋತ್ಸವ

ಈ ಬಾರಿ ಮಹಿಳೆಯರೇ ಒಗ್ಗೂಡಿ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ವಿಶೇಷ ಪ್ರಯತ್ನ ಮಾಡು ತ್ತಿದ್ದೇವೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯ ರಿಂದ ಬೈಕ್ ರ‍್ಯಾಲಿ ನಡೆಯಲಿದೆ ಎಂದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಶಾಸಕ ಸುರೇಶಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.23 ರಂದು ಮಹಿಳಾ ಕನ್ನಡ ರಾಜ್ಯೋತ್ಸವ

-

Ashok Nayak
Ashok Nayak Dec 20, 2025 8:39 PM

ಚಿಕ್ಕನಾಯಕನಹಳ್ಳಿ : ಪಟ್ಟಣದ ಸಾಂಸ್ಕೃತಿಕ ಕೇಂದ್ರವಾದ ತೀನಂಶ್ರೀ ಭವನದಲ್ಲಿ ಡಿ.23 ರಂದು ಅತ್ಯಂತ ಸಡಗರದ ಮಹಿಳಾ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕಿ ರೂಪಶ್ರೀ ತಿಳಿಸಿದರು.

Women 2

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಈ ಬಾರಿ ಮಹಿಳೆಯರೇ ಒಗ್ಗೂಡಿ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ವಿಶೇಷ ಪ್ರಯತ್ನ ಮಾಡು ತ್ತಿದ್ದೇವೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯ ರಿಂದ ಬೈಕ್ ರ‍್ಯಾಲಿ ನಡೆಯಲಿದೆ ಎಂದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮವನ್ನು ಉದ್ಘಾಟಿಸ ಲಿದ್ದಾರೆ. ಶಾಸಕ ಸುರೇಶಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಅಶೋಕ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಮಮತ, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ವಿಧಾನ ಪರಿಷತ್ ಸದಸ್ಯ ರಮೇಶಬಾಬು, ಸಿಪಿಐ ಜನಾರ್ಧನ್, ಕಸಪಾ ಅಧ್ಯಕ್ಷ ರವಿಕುಮಾರ್ ಕಟ್ಟೆಮನೆ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೀಶ್ ಆಗಮಿಸಲಿದ್ದಾರೆ.

ಇದನ್ನೂ ಓದಿ: Kannada Rajyotsava 2025: ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ: ಕೆ.ವಿ. ಪ್ರಭಾಕರ್‌

ಸೇವೆ ಮತ್ತು ಸಂಭ್ರಮದ ಸಮಾಗಮ ಹಾಗು ಸಾಧಕಿಯರಿಗೆ ಸನ್ಮಾನ

ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗು ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕಿಯರಿಗೆ ಮಹಿಳಾ ಕನ್ನಡ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಡಿಸಿ ಶುಭಕಲ್ಯಾಣ್, ಎಸಿ ನಾಹಿದಾ, ಕಸಾಪ ಮಾಜಿ ಜಿಲ್ಲಾಧ್ಯಕ್ಷೆ ಬ.ಹ.ರಮಾಕುಮಾರಿ, ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆ, ಸೃಜನಾ ಸಂಘ ಅಧ್ಯಕ್ಷೆ ಇಂದಿರಮ್ಮ, ಉಪನ್ಯಾಸಕಿ ಮೇ.ನಾ.ತರಂಗಿಣಿ, ಯೋಗ ಗುರು ವೇದಶ್ರೀ, ಶಿಕ್ಷಕಿ ಸಂಜುಶ್ರೀ, ವಿದ್ಯಾವಾರಿಧಿ ಶಾಲೆಯ ಕಾರ್ಯದರ್ಶಿ ಕವಿತಾ, ಮಹಾನಟಿ ಶೋ ಕಲಾವಿದೆ ದೀಪಿಕಾ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಕನ್ನಡಾಭಿಮಾನದ ಈ ಹಬ್ಬಕ್ಕೆ ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರೂಪಶ್ರೀ ಮನವಿ ಮಾಡಿದರು.

ರೂಪಾಂತರ ಮಹಿಳಾ ಸಶಸ್ತೀಕರಣ ಮತ್ತು ಸಮುದಾಯ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷೆ ಶಕುಂತಲಾ, ಸದಸ್ಯೆ ಹರ್ಷಿತಾ ಹಾಗು ಉಷಾ ಉಪಸ್ಥಿತರಿದ್ದರು.