DK Shivakumar: ಧರ್ಮ, ಭಾವನೆಗಳ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ ಮಾಡುತ್ತಿವೆ ಎಂದ ಡಿ.ಕೆ.ಶಿವಕುಮಾರ್
DK Shivakumar: ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜತೆ ಡಿಕೆಶಿ ಅವರು ಮಾತನಾಡಿದ್ದಾರೆ.

-

ಉಡುಪಿ: ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರದ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು ಬಂದಿದ್ದೇನೆ. ನಿಮ್ಮದು ಸೇರಿದಂತೆ ಎಲ್ಲರ ಆಶೀರ್ವಾದ ಬೇಕು” ಎಂದು ಚಟಾಕಿ ಹಾರಿಸಿದರು.
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಚರ್ಚೆಯಾಗುತ್ತಿರುವಾಗ ಪ್ರಾರ್ಥನೆಗೆ ಇದು ಸೂಕ್ತ ಕಾಲವೇ ಎಂದು ಕೇಳಿದಾಗ, “ಅದೆಲ್ಲಾ ಏನಿಲ್ಲ. ಪ್ರಾರ್ಥನೆ ನನ್ನ ಸಹಜ ಪದ್ಧತಿ. ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ