ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Road Accident: ಕರಾವಳಿಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಕುಟುಂಬದ ಇಬ್ಬರು ಅಪಘಾತಕ್ಕೆ ಬಲಿ, ನಾಲ್ವರಿಗೆ ಗಾಯ

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಬೈಂದೂರು ತಾಲೂಕಿನ ನಾವುಂದ ಬಳಿ ಅಪಘಾತ ನಡೆದಿದೆ.

ಉಡುಪಿ ಬಳಿ ಅಪಘಾತ, ಬೆಂಗಳೂರಿನ ಕುಟುಂಬದ ಇಬ್ಬರು ಬಲಿ, ನಾಲ್ವರಿಗೆ ಗಾಯ

ಬೈಂದೂರಿನಲ್ಲಿ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Mar 30, 2026 8:55 AM

ಉಡುಪಿ, ಮಾ.30: ನಿಂತಿದ್ದ ಕಂಟೈನರ್​ಗೆ ಡಿಕ್ಕಿ (Road Accident) ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಮಮತಾ (36) ಹಾಗೂ ಮಗಳು ಧೃತಿಕಾ (14) ಸ್ಥಳದಲ್ಲಿಯೇ ಅಸುನೀಗಿದರೆ, ಪತಿ ರಾಘು (40), ಮಕ್ಕಳಾದ ಜಾಹ್ನವಿ (12), ಚಾರ್ವಿ (10) ಹಾಗೂ ಕಾರು ಚಾಲಕ ಕಿರಣ್​​ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್​​ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಉಪನ್ಯಾಸಕ ಸಾವು; ಅಡಿಕೆ ತೋಟದಲ್ಲಿ ಶವಕ್ಕೆ ಬೆಂಕಿ!

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು (Children) ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕಿರಣ್ (6), ಬಸಮ್ಮ (11), ಶರತ್ (6), ಹನುಮೇಶ್ (7) ಮೃತ ದುರ್ದೈವಿಗಳು.

ಶಾಲೆಗೆ ರಜೆ ಇದ್ದ ಕಾರಣ ಮಕ್ಕಳು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಆಘಾತಗೊಂಡಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಎಳೆಯ ಕಂದಮ್ಮಗಳ ಸಾವು ನೋಡಿ ಹೆತ್ತವರು ಕಣ್ಣೀರು ಇಡುತ್ತಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.