ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Heart Attack: ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ಉಡುಪಿ ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ.

ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಮೃತ ಎಸ್‌ಐ ನಾಸಿರ್‌ ಹುಸೇನ್ -

ಹರೀಶ್‌ ಕೇರ
ಹರೀಶ್‌ ಕೇರ Mar 2, 2026 7:29 AM

ಉಡುಪಿ, ಮಾರ್ಚ್‌ 2: ಪೊಲೀಸ್ ಮ್ಯಾರಥಾನ್ (Police Marathon) ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಎಸ್‌ಐ (SI) ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ (Udupi news) ನಡೆದಿದೆ. ಹೃದಯವೈಫಲ್ಯದಿಂದ (Heart failure) ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು (Heart Attack) ಸಾವನ್ನಪ್ಪಿದ ಅಧಿಕಾರಿ.

ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಪಕ್ಕದಲ್ಲೇ ಇದ್ದ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಹುಸೇನ್ ಸಾವನ್ನು ಆಸ್ಪತ್ರೆ ವೈದ್ಯರು ದೃಢಪಡಿಸಿದರು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಾಸಿರ್ 2010 ಬ್ಯಾಚ್‌ನ ಪೊಲೀಸ್ ಅಧಿಕಾರಿ. 58 ವರ್ಷದ ನಾಸಿರ್ ಹುಸೇನ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದರು. ಇತ್ತೀಚೆಗೆ ಶೆಟ್ಟಿಕಟ್ಟೆ ಅಪಘಾತ ನಡೆದಾಗ ಅಧಿಕಾರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಗೆ ಬಂದಿದ್ದರು.

Elephant attack in Madikeri: ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು