ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Appanna Hegde no more: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬನ್ನೂರು ಅಪ್ಪಣ್ಣ ಹೆಗ್ಡೆ ಅವರು ಸಹಕಾರಿ ಕ್ಷೇತ್ರದ ಧುರೀಣರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಬನ್ನೂರು ಅಪ್ಪಣ್ಣ ಹೆಗ್ಡೆ -

ಹರೀಶ್‌ ಕೇರ
ಹರೀಶ್‌ ಕೇರ Feb 7, 2026 10:13 AM

ಉಡುಪಿ. ಫೆ.07 : ಬೈಂದೂರಿನ ಮಾಜಿ ಶಾಸಕ, ಹಿರಿಯ ರಾಜಕಾರಣಿ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು (Bannuru Appanna Hegde no more) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ (udupi news) ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ.

1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಬಸ್‌ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ

ಶಿವಮೊಗ್ಗ : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್‌ ನಿಧನ; ಬೆಂಗಳೂರು ಚಲೋ ಮುಷ್ಕರ ಮುಂದೂಡಿಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಡುಬಾ ಗ್ರಾಮದ ಬಳಿ ಘಟನೆ ನಡೆದಿದೆ. ಹೃದಯಾಘಾತವಾದರೂ ಚಾಲಕ ರಮೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ. ಹೃದಯಾಘಾತವಾದರೂ ಚಾಲಕ ರಮೇಶ್ ರಸ್ತೆ ಬದಿ ಬಸ್ ನಿಲ್ಲಿಸಿದ್ದಾರೆ. ಬಸ್ ಚಾಲನೆ ವೇಳೆಯೇ ರಮೇಶ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಪ್ರಯಾಣಿಕರು ಅಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.