ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Udupi news: ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 9, 2026 7:42 AM

ಉಡುಪಿ, ಫೆ.09 : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ನಿವೃತ್ತಿಯ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ (self harming) ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ (udupi news) ನಡೆದಿದೆ.

ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರರಾಗಿದ್ದಾರೆ. ಮೃತರು ಮಣಿಪಾಲದ ವ್ಯಾಲಿ ವ್ಯೂ ಹೊಟೇಲ್​ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ನಿವೃತ್ತಿ ಅಂಚಿನಲ್ಲಿದ್ದ ಅವರು ಆರ್ಥಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಿಡ್ಜ್‌ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವು

ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ನಾಗಣ್ಣ ಕ್ರಾಸ್ ಬಳಿ ನಡೆದಿದೆ. ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ ಕರಟ್ಮಲ್ (40) ಪತ್ನಿ ಶಿಲ್ಪ (35) ಹಾಗೂ ಅವರ ಪುತ್ರಿ ರಕ್ಷಿತ (12) ಮೃತಪಟ್ಟವರು. ಮಗ ದಿಗಂಬರ್ (15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ನಿಂದರಾಜೇಶ್ವರ ಗ್ರಾಮಕ್ಕೆ ನಾಲ್ವರು ಒಂದೇ ಬೈಕ್‌ನಲ್ಲಿ ಬರುವಾಗ ಈ ಅಪಘಾತ ಸಂಭವಿಸಿದೆ.

ಬೋಲೆರೋ ಪಲ್ಟಿಯಾಗಿ 3 ಕಾರ್ಮಿಕರು ದುರ್ಮರಣ

ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ಮುನಿಯಮ್ಮ ವೆಂಕಟಪ್ಪ ಸೇರಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಈ ದುರಂತ ಸಂಭವಿಸಿದೆ. ಅಪಘಾತದ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.