ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Spoorthi Shetty: ಮಿಸ್ ಯೂನಿವರ್ಸ್ ಇಂಡಿಯಾ 2026 ಅಂತಿಮ ಸುತ್ತಿಗೆ ಉಡುಪಿಯ ಸ್ಫೂರ್ತಿ ಶೆಟ್ಟಿ ಅಯ್ಕೆ

Miss Universe India 2026: ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಫೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 23ರಂದು ನವದೆಹಲಿಯಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಫೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿಗೆ ಸ್ಫೂರ್ತಿ ಶೆಟ್ಟಿ ಆಯ್ಕೆ

ಸ್ಫೂರ್ತಿಶೆಟ್ಟಿ -

Prabhakara R
Prabhakara R Jul 17, 2026 6:36 PM

ಉಡುಪಿ: ಉಡುಪಿ ಮೂಲದ ಸ್ಫೂರ್ತಿ ಶೆಟ್ಟಿ (Spoorthi Shetty) ಅವರು 'ಮಿಸ್‌ ಯೂನಿವರ್ಸ್‌ ಇಂಡಿಯಾ 2026' ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 23ರಂದು ನವದೆಹಲಿಯಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ (Miss Universe India 2026) ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಫೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಫೂರ್ತಿ ಶೆಟ್ಟಿ ಅವರು ಸಾಮಾನ್ಯ ಕುಟುಂಬ ಹಿನ್ನೆಲೆಯಿಂದ ಬಂದವರಾಗಿದ್ದು, ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದಾರೆ. ಎಂಬಿಎ ಪದವೀಧರೆಯಾಗಿರುವ ಅವರು ಪೂರ್ಣಕಾಲಿಕ ಉದ್ಯೋಗದ ಜೊತೆಗೆ ಹವ್ಯಾಸವಾಗಿ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟು ಇದೀಗ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯ ವೇದಿಕೆಯನ್ನು ತಲುಪಿದ್ದಾರೆ.

ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಫೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ.

ಸ್ಫೂರ್ತಿ ಅವರ ತಾಯಿ ಮಣಿಪಾಲ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಪರಿಶ್ರಮ ಮತ್ತು ಉಡುಪಿ ಜಿಲ್ಲೆಯ ಈ ಯುವತಿಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.