ಉಡುಪಿಯ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ!
Udupi News: ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆತನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ. -
ಉಡುಪಿ: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ಜಂಕ್ಷನ್‌ನಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗದಗ ಮೂಲದ ಯುವಕ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗಿದೆ.
ಸಂಚಾರ ದಟ್ಟಣೆಯ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸ್ಥಳದಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಪೊಲೀಸರು ಯುವಕನನ್ನು ಮನವೊಲಿಸಿ ಗದಗಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೈಕೆ ಮಾಡುವವರು ಇಲ್ಲವೆಂದು ರೈಲಿಗೆ ಸಿಲುಕಿ ವೃದ್ಧ ದಂಪತಿ ಆತ್ಮಹತ್ಯೆ
ಹಾಸನ: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ವೃದ್ಧ ದಂಪತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ನಗರದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ (80) ಮತ್ತು ಮೇರಿ (73) ಮೃತರು.
ದಂಪತಿಗೆ ಆಸ್ತಿ, ಮನೆ ಹಾಗೂ ಕಾಫಿ ತೋಟ ಇದ್ದರೂ ವೃದ್ಧಾಪ್ಯದಲ್ಲಿ ನೋಡಿಕೊಳ್ಳುವವರು ಇಲ್ಲದೇ ಒಂಟಿಯಾಗಿದ್ದರು. ಇಬ್ಬರು ಪುತ್ರರಿದ್ದರೂ ತಮ್ಮ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬ ಬೇಸರ ದಂಪತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ವಿರಾಜಪೇಟೆಯ ವೃದ್ಧಾಶ್ರಮದಲ್ಲೂ ಅವರು ಉಳಿದಿದ್ದರು.
Self harming: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಮಗ ಆತ್ಮಹತ್ಯೆ
ಒಬ್ಬ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಮತ್ತೊಬ್ಬ ಪುತ್ರ ಊರಿನಲ್ಲೇ ವಾಸವಾಗಿದ್ದಾನೆ. ಶನಿವಾರ ರಾತ್ರಿ ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಠಾಣೆ ಪ್ರಕರಣ ದಾಖಲಾಗಿದೆ.