ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bhatkal Tragedy: ಭಟ್ಕಳದಲ್ಲಿ ಘೋರ ದುರಂತ; ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 11 ಮಂದಿ ದಾರುಣ ಸಾವು

ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ 11 ಮಂದಿ ಮೃತಪಟ್ಟಿದ್ದು, ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 11 ಮಂದಿ ಜಲ ಸಮಾಧಿ

ಭಟ್ಕಳ ಮೃತದೇಹಗಳಿಗಾಗಿ ಶೋಧ -

Prabhakara R
Prabhakara R May 24, 2026 3:47 PM

ಶಿರಸಿ/ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ (Bhatkal Tragedy) ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 11 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ನದಿಗೆ ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ 11 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

​ದುರಂತಕ್ಕೆ ಕಾರಣವೇನು?

​ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ನೀರಿನ ರಭಸಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

​ನದಿಯಲ್ಲಿ ಮುಳುಗಿ ಮೃತಪಟ್ಟವರೆಲ್ಲರ ಮೃತದೇಹಗಳನ್ನು ಅಳ್ವೆಕೋಡಿ ಬಳಿ ಪತ್ತೆಹಚ್ಚಿ ಹೊರತೆಗೆಯಲಾಗಿದೆ. ​ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34) , ​ಮಾಲತಿ ನಾಯ್ಕ (38) , ​ಮಾಸ್ತಮ್ಮ ನಾಯ್ಕ ಸೇರಿ 11 ಮಂದಿ ಮೃತರಾಗಿದ್ದಾರೆ.

ಘಟನೆಯಲ್ಲಿ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿನ ಮೃತದೇಹ ಪತ್ತೆಯಾಗಿದ್ದು, ಒಬ್ಬರ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಕರ್ತವ್ಯಕ್ಕೆ ತೆರಳುತ್ತಿದ್ದ ASI ಮೇಲೆ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು

​ಘಟನಾ ಸ್ಥಳಕ್ಕೆ ಭಟ್ಕಳ ಠಾಣೆಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಶೋಧ ಕಾರ್ಯ ಮುಂದುವರಿದಿದೆ.