ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Sirsi News: ಶಿರಸಿಯಲ್ಲಿ ಆಘಾತಕಾರಿ ಘಟನೆ; ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತೋಡದಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಲಕಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದಳು. ಈ ವೇಳೆ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ!

ಸಾಂದರ್ಭಿಕ ಚಿತ್ರ -

Prabhakara R
Prabhakara R Jun 12, 2026 6:18 PM

ಶಿರಸಿ: ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಯು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ತಾಲೂಕಿನ ತೋಡದಗದ್ದೆ ಗ್ರಾಮದಲ್ಲಿ ನಡೆದಿದೆ. ಟಾಯ್ಲೆಟ್‌ನಲ್ಲಿ ಹೆರಿಗೆಯಾದ ಬಳಿಕ ಬಾಲಕಿಯು ಹೆದರಿ, ನವಜಾತ ಶಿಶುವನ್ನು ಕಿಟಕಿಯಿಂದ ಎಸೆದಿದ್ದಾಳೆ. ಇದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಇಷ್ಟೆಲ್ಲಾ ಆದರೂ ಘಟನೆ ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಎಂದಿನಂತೆ ಹಾಸ್ಟೆಲ್‌ನ ಕಸ ಆರಿಸುವವರು ಕಸ ಎತ್ತಲು ಬಂದಿದ್ದಾರೆ. ಈ ವೇಳೆ ಹಾಸ್ಟೆಲ್ ಟಾಯ್ಲೆಟ್ ಕಿಟಕಿ ಬಳಿ ನವಜಾತ ಶಿಶುವಿನ ಶವ ಸಿಕ್ಕಿದೆ. ತಕ್ಷಣವೇ ಕಸ ಆರಿಸುವವರು ಹಾಸ್ಟೆಲ್‌ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಸ್ಥಳೀಯರಿಗೂ ವಿಷಯ ಗೊತ್ತಾಗಿದೆ. ಕೂಡಲೇ ಸ್ಥಳೀಯರು ಶಿರಸಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಲಕಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದಳು. ಈ ವೇಳೆ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಶಿರಸಿ ತಹಶೀಲ್ದಾರ್ ಪಟ್ಟರಾಜ್ ಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ವಿಚಾರಣೆ ನಡೆಸಿದಾಗ ಬಾಲಕಿ ಸ್ಫೋಟಕ ವಿಚಾರ ಬಾಯಿ ಬಿಟ್ಟಿದ್ದಾಳೆ. ತನ್ನ ದೊಡ್ಡಪ್ಪನ ಮಗ ಅಂದರೆ ವರಸೆಯಲ್ಲಿ ಅಣ್ಣನಾಗಬೇಕಿದ್ದವನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ, ಗರ್ಭಿಣಿಯಾಗಿರುವುದಾಗಿ ಹೇಳಿದ್ದಾಳೆ. ಸದ್ಯ ಈ ಬಗ್ಗೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಾವಿನ ಹಣ್ಣು ತಿಂದು ಇಬ್ಬರು ಬಾಲಕಿಯರು ಸಾವು

ಬೀದರ್‌: ಮಾವಿನ ಹಣ್ಣು ತಿಂದ ಬಳಿಕ ಸಹೋದರಿಯರಿಬ್ಬರು ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ ನಡೆದಿದೆ. ಮನೆಯಲ್ಲಿ ಊಟದ ಬಳಿಕ ಮಾವಿನ ಹಣ್ಣು ತಿಂದ ಇಬ್ಬರು (sisters die after eating mango) ಸಹೋದರಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ವಿನ ಹಣ್ಣು ಸೇವಿಸಿ ಭವಾನಿ ವೈಜಿನಾಥ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಸಾವನ್ನಪ್ಪಿದ್ದಾರೆ.

ತಾಯಿ ಇಂದುಮತಿ ಹಾಗೂ ಒಟ್ಟು 5 ಜನ ಹೆಣ್ಣು ಮಕ್ಕಳು ಮಾವಿನ ಹಣ್ಣು ತಿಂದಿದ್ದಾರೆ ಎನ್ನಲಾಗಿದೆ. ಮಾವು ತಿಂದ ಕೆಲ ಹೊತ್ತಿನಲ್ಲೇ ಎಲ್ಲರಿಗೂ ವಾಂತಿ, ಭೇದಿ ಕಾಣಿಸಿಕೊಂಡು ಆರೋಗ್ಯ ಏಕಾಏಕಿ ಹದಗೆಟ್ಟಿದೆ. ಮನೆಯವರು ತಕ್ಷಣ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಭವಾನಿ ಮತ್ತು ಸಂಧ್ಯಾರಾಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ: ಶೋಕದಲ್ಲಿ ಮುಳುಗಿದ ಗ್ರಾಮಸ್ಥರು

ಇನ್ನೊಬ್ಬ ಸಹೋದರಿ ವಿಜಯಶ್ರೀ (19) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿ ಇಂದುಮತಿ ಹಾಗೂ ಮತ್ತೊಬ್ಬ ಸಹೋದರಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವರದಿ ಬಂದ ಬಳಿಕವೇ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕುರಿತು ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ.