ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sharavathi Pump Storage: ಉತ್ತರ ಕನ್ನಡಕ್ಕೆ ಮಾರಕವಾಗಿರುವ ನದಿ ತಿರುವು ಯೋಜನೆಗಳನ್ನು ಕೈಬಿಡಿ; ಸಿಎಂ ಸಿದ್ದರಾಮಯ್ಯಗೆ ಮನವಿ

ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಉಪಸ್ಥಿತರಿದ್ದರು. ಸ್ವರ್ಣವಲ್ಲೀ ಸ್ವಾಮೀಜಿಯವರ ನೇತೃತ್ವದಲ್ಲಿ ಜನಾಂದೋಲನ ನಡೆಯುತ್ತಿದೆ ಎಂಬ ಸಂಗತಿಯನ್ನು ವಿ.ಎನ್‌. ಹೆಗಡೆ ಬೊಮ್ಮನಳ್ಳಿ ಮುಖ್ಯಮಂತ್ರಿ ಗಮನಕ್ಕೆ ತಂದರು.

ನದಿ ತಿರುವು ಯೋಜನೆಗಳನ್ನು ಕೈಬಿಡಿ; ಸಿಎಂ ಸಿದ್ದರಾಮಯ್ಯಗೆ ಮನವಿ

-

Vishakha Bhat Vishakha Bhat Nov 1, 2025 6:31 AM

ಶಿರಸಿ: ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ಡ್‌ (Sharavathi Pump Storage) ಸ್ಟೋರೇಜ್‌ ಯೋಜನೆಗೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮನವಿ ಸಲ್ಲಿಸಲಾಯಿತು. ವಿಧಾನ ಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪರಿಸರ ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿ ಜೊತೆ ವಿಶೇಷ ಸಮಾಲೋಚನೆ ನಡೆಸಿ ಪಶ್ಚಿಮಘಟ್ಟದ ಸಂರಕ್ಷಣೆಗೆ ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಜಿಲ್ಲೆ ಈಗಾಗಲೇ ಹತ್ತಾರು ಬೃಹತ್‌ ಯೋಜನೆಗಳ ಭಯದಿಂದ ನಲುಗಿ ಹೋಗಿದೆ. ಪರಿಸರ ಧಾರಣ ಸಾಮರ್ಥ್ಯ ಮುಗಿದಿದೆ. ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳು ಜಾರಿಯಾದರೆ ಭಾರೀ ಅವಘಡಗಳು ನಡೆಯುವ ಗಂಭೀರ ಪರಿಸ್ಥಿತಿ ಉಂಟಾಗಲಿದೆ ಎಂದು ಹೇಳಿದರು.

ನದಿ ತಿರುವು ಯೋಜನೆ ನಿಲ್ಲಿಸಲು ಶಾಸಕ ಶಿವರಾಮ್‌ ಹೆಬ್ಬಾರ ಮನವಿ ಮಾಡಿದರು. ಶಾಸಕ ಭೀಮಣ್ಣ ನಾಯ್ಕ, ಈ ಯೋಜನೆಯಿಂದ ಬೇಡ್ತಿ - ಅಘನಾಶಿನಿ - ಶರಾವತಿ ನದಿಗಳಲ್ಲಿ ನೀರೇ ಇಲ್ಲದ ಪರಿಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತ ಪಡಿಸಿದರು.ವನವಾಸಿಗಳ ಪರಿಸ್ಥಿತಿ ವನಗಳ ನಾಶದಿಂದ ಸಂಕಷ್ಟಕ್ಕೆ ಈಡಾಗಲಿದೆ. ನದಿ ಕಣಿವೆಗಳ ಎಲ್ಲ ಜನ ಸಮುದಾಯಗಳು, ಜೀವ ವೈವಿಧ್ಯಕ್ಕೆ ಕುತ್ತು ಬರಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು.

ಬೇಡ್ತಿ - ಅಘನಾಶಿನಿ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಪಶ್ಚಿಮಘಟ್ಟದಲ್ಲಿ ಬೇಡ್ತಿ - ಅಘನಾಶಿನಿ - ಶರಾವತಿ ನದಿ ಯೋಜನೆಗಳನ್ನು ಸ್ಥಗಿತಗೊಳಿಸಿ, ವಿಜ್ಞಾನಿಗಳು, ಜನಪ್ರತಿನಿಧಿಗಳು ಸಂಘಟನೆಗಳ ಜೊತೆ ವಿಶೇಷ ಪುನಃ ವಿಮರ್ಶೆ ಮಾಡಬೇಕೆಂದು ಮನವಿ ಮಾಡಿದರು.

ಈ ಸುದ್ದಿಯನ್ನೂ ಓದಿ: Viral Video: ರೀಲ್ಸ್‌ ಮಾಡಲು ಹೋಗಿ ಯಮುನಾ ನದಿಯಲ್ಲಿ ಬಿದ್ದ ಬಿಜೆಪಿ ಶಾಸಕ; ವಿಡಿಯೋ ನೋಡಿ

ಸ್ವರ್ಣವಲ್ಲೀ ಸ್ವಾಮೀಜಿಯವರ ನೇತೃತ್ವದಲ್ಲಿ ಜನಾಂದೋಲನ ನಡೆಯುತ್ತಿದೆ ಎಂಬ ಸಂಗತಿಯನ್ನು ವಿ.ಎನ್‌. ಹೆಗಡೆ ಬೊಮ್ಮನಳ್ಳಿ ಮುಖ್ಯಮಂತ್ರಿ ಗಮನಕ್ಕೆ ತಂದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳ ಜೊತೆ ಚರ್ಚಿಸಿ ತಮ್ಮೆಲ್ಲರ ಜೊತೆಗೆ, ವಿಜ್ಞಾನಿಗಳೊಂದಿಗೆ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವೆಂಕಟೇಶ ನಾಯ್ಕ, ಬಾಲಚಂದ್ರ ಸಾಯಿಮನೆ, ಬೆಂಗಳೂರಿನ ರಮೇಶ ಭಟ್, ನರಹರಿ ಇದ್ದರು.