ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಬುಧವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿ ಬಂದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಗಣಪತಿ ವಿಸರ್ಜನೆ ವೇಳೆ ಭಟ್ಕಳದ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ

ಗಣಪತಿ ವಿಸರ್ಜನೆ ವೇಳೆ ಮದರಸಾ ಮೇಲೆ ಕಲ್ಲು ತೂರಾಟ ಆರೋಪ -

Vishakha Bhat Heggar
Vishakha Bhat Heggar Sep 17, 2026 11:12 AM

ಭಟ್ಕಳ: ಬುಧವಾರ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Stone-pelting at a mosque in Bhatkal) ಕೇಳಿ ಬಂದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ ಎನ್ನಲಾಗಿದೆ.

ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ದಾಳಿಯಿಂದಾಗಿ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಹಾನಿ ಸಂಭವಿಸಿದೆ. ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಈ ಸಂಬಂಧ ದೂರು ದಾಖಲಾಗಿದ್ದು, ಸ್ಥಳಕ್ಕೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಳಿಕ ಭಟ್ಕಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲು ತೂರಾಟದ ಆರೋಪದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಲಿದ್ದಾರೆ.