Murder Case: ಬೆಳ್ಳಂಬೆಳಿಗ್ಗೆ ನಡುರಸ್ತೆಯಲ್ಲೇ ನಡೀತು ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ
ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ಮಾಡಿ ದುಷ್ಕರ್ಮಿಗಳುಸ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ.


ಕಾರವಾರ: ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ (Murder Case) ಮಾಡಿ ದುಷ್ಕರ್ಮಿಗಳುಸ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ. ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್‌ನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವಯಕ್ತಿಕ ಕಾರಣದಿಂದ ಕೊಲೆ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಉತ್ತರ ಕನ್ನಡ ವರಿಷ್ಠಾಧಿಕಾರಿ ಎಂ ನಾರಾಯಣ್, ಕೊಲೆಯಾದ ವ್ಯಕ್ತಿ ಮಾಜಿ ನಗರ ಸಭೆ ಸದ್ಯ ಸತೀಶ್ ಕೋಳಂಕರ್ ಈ ಮೊದಲು ರೌಡಿ ಶೀಟರ್ ಆಗಿದ್ದ. ಈತನ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಸತೀಶ್ ಕೊಳಂಕರ್ ಕಾರವಾರ ತಾಲೂಕಿನ ಚಿತ್ತಾಕುಲ ನಿವಾಸಿ. ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಾಗ ಚಾಕುವಿನಿಂದ ಇರಿಯಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವೈಯಕ್ತಿಕ ಕಾರಣಕ್ಕೆ ಈತನ ಹತ್ಯೆಯಾಗಿದೆ. ಈತನಿಗೆ ಎರಡು ಲಕ್ಷ ಹಣವನ್ನು ಸಾಲ ನೀಡಿದ್ದ ವ್ಯಕ್ತಿಗಳು ಮರಳಿ ಕೇಳಿದರೂ ನೀಡಿರಲಿಲ್ಲ. ಕೆಲವು ದಿನದ ಹಿಂದೆ ಕಾರವಾರದ ಪ್ರೀಮಿಯರ್ ಹೋಟೆಲ್ನಲ್ಲಿ ಹಣ ವಾಪಾಸ್ ಕೊಡುವಂತೆ ಗಲಾಟೆ ಆಗಿದೆ. ಇಂದು ಬೆಳಗ್ಗೆ ಹಣ ವಾಪಾಸ್ ಕೇಳಿದ್ದಾರೆ, ಈ ವಿಷಯಕ್ಕೆ ಕಿರಿಕ್ ಆಗಿ ಗಲಾಟೆ ವಿಕೋಪಕ್ಕೆ ಹೋಗಿ ಹತ್ಯೆಯಾಗಿದೆ. ಆರೋಪಿಗಳ ಮಾಹಿತಿ ದೊರೆತಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಕಾರವಾರದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಅವರು ತಿಳಿಸಿದರು.
ಈ ಸುದ್ದಿಯನ್ನೂ ಓದಿ: Murder Case: ಇಡೀ ದೇಶವನ್ನೇ ಬೆಚ್ಚಿ ಬೀಳಿಸೋ ಮತ್ತೊಂದು ಘಟನೆ; 8 ತಿಂಗಳ ಗರ್ಭಿಣಿಯನ್ನು ಹತ್ಯೆಗೈದ ಪಾಪಿ ಪತಿ
ಕೊಲೆಯಾದ ವ್ಯಕ್ತಿಯ ಮಗಳು ಪೂರ್ಣಿಮಾ ಪ್ರತಿಕ್ರಿಯಿಸಿದ್ದು, ನಿತೇಶ್ ತಾಂಡೆಲ್ ಹಾಗೂ ದರ್ಶನ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ಕಾರವಾರದ ಪ್ರಿಮಿಯರ್ ಹೋಟೆಲ್ನಲ್ಲಿ ನನ್ನ ತಂದೆಯ ಮೇಲೆ ಹಲ್ಲೆ ಆಗಿತ್ತು. ಆ ದಿನ ನಮ್ಮ ತಂದೆಯ ಮುಖ ಪೂರ್ತಿ ಕೆಂಪಗಾಗಿತ್ತು. ಯಾಕೆ, ಏನು ಅಂತ ಕಾರಣ ತಿಳಿಸದೆ ಹತ್ತಾರು ಜನ ಹಲ್ಲೆ ನಡೆಸಿದ್ದರು ಎಂದು ಹೇಳಿದರು.