Electric Shock: ಅಂಕೋಲಾದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವು
Electric Shock: ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ಜರುಗಿದೆ. ಮಹಂತೇಶ್ ಬಾನಾವಳಿಕರ್ (28) ಎಂದು ಗುರುತಿಸಲಾಗಿದೆ. ಭಾರೀ ಗಾಳಿ, ಮಳೆಯಿಂದಾಗಿ ನಡೆದುಕೊಂಡು ಹೋಗುವ ಓಣಿಯೊಂದರಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಯುವಕ ಮಹಂತೇಶ್ ಬಾನಾವಳಿಕರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.


ಅಂಕೋಲಾ: ಓಣಿಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock) ಯುವಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ಜರುಗಿದೆ. ಮಹಂತೇಶ್ ಬಾನಾವಳಿಕರ್ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಭಾರೀ ಗಾಳಿ, ಮಳೆಯಿಂದಾಗಿ ನಡೆದುಕೊಂಡು ಹೋಗುವ ಓಣಿಯೊಂದರಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಯುವಕ ಮಹಂತೇಶ್ ಬಾನಾವಳಿಕರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಅಥಣಿಯಲ್ಲಿ ವಿದ್ಯುತ್ ತಗುಲಿ ಶಾಲಾ ಶಿಕ್ಷಕ ಸಾವು
ಅಥಣಿ: ಮನೆ ಮುಂದಿನ ಗೇಟ್ ತೆರೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಪ್ರೌಢಶಾಲೆ ಶಿಕ್ಷಕ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ. ಪ್ರವೀಣಕುಮಾರ ಜಿ ಕಡಪಟ್ಟಿಮಠ (41) ಮೃತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ತೆರಳಿದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್ ತಗುಲಿದ್ದು (Electric Shock), ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ತೇರದಾಳ ಗ್ರಾಮದವರಾದ ಇವರು, ಅಥಣಿ ತಾಲೂಕಿನ ಸತ್ತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರವೀಣಕುಮಾರ್ ಕುಟುಂಬ ನಿನ್ನೆಯಷ್ಟೇ ವಿವಾಹ ಮಹೋತ್ಸವ ಆಚರಿಸಿಕೊಂಡಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದಿಡೀರ್ ಹೃದಯವೈಫಲ್ಯ: 19 ವರ್ಷದೊಳಗಿನ ಇಬ್ಬರ ಸಾವು
ಬೆಂಗಳೂರು: ಎರಡು ಪ್ರತ್ಯೇಕ ಘಟನೆಗಳಲ್ಲಿ ಒಬ್ಬ ಯುವಕ ಹಾಗೂ ಒಬ್ಬಳು ಯುವತಿ ದಿಡೀರ್ ಹೃದಯಾಘಾತದಿಂದ (Cardiac Arrest) ಮೃತಪಟ್ಟಿದ್ದಾರೆ. ಇಬ್ಬರೂ 19 ವರ್ಷ ವಯಸ್ಸಿನವರಾಗಿದ್ದು, ಸಣ್ಣ ವಯಸ್ಸಿನ ಯುವಕ ಯುವತಿಯರು ಹೃದಯ ವೈಫಲ್ಯದಿಂದ (Heart Failure) ಮೃತಪಡುತ್ತಿರುವುದು ಹೆಚ್ಚುತ್ತಿದೆ ಎಂಬ ಕಳವಳಕ್ಕೆ ಮತ್ತೆರಡು ಸಾಕ್ಷಿಯಾಗಿದೆ. ಇಬ್ಬರೂ ಹಾಸನ (Hassan) ಜಿಲ್ಲೆಯವರಾಗಿದ್ದು, ಯುವಕನ ಸಾವು ಬೆಂಗಳೂರಿನಲ್ಲಿ (Bengaluru) ಸಂಭವಿಸಿದೆ.
ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ (Holenarasipur) ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್- ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಜೀವ ಹೊರಟುಹೋಗಿದೆ.
ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು (Arakalagudu) ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಯುವಕ, ಗ್ರಾಮದ ಅನಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ | Murder case: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಗೈದು ಪತಿ ಪರಾರಿ
ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದು, ಆತನನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.