ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌; ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ, ʼನೋ ಸ್ಟಾಕ್‌ʼ!

Iran-Israel war: ಇರಾನ್‌-ಇಸ್ರೇಲ್‌ ಯುದ್ಧದಿಂದ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಹೆಚ್ಚುವರಿ ಪೆಟ್ರೋಲ್, ಡೀಸೆಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದರಿಂದ ಭಟ್ಕಳಲ್ಲಿ ಪೆಟ್ರೋಲ್‌ ಬಂಕ್‌ಗಳ ಮುಂದೆ ವಾಹನ ಸವಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ.

ಬೆಲೆ ಏರಿಕೆ ಭೀತಿ; ಭಟ್ಕಳದಲ್ಲಿ ಪೆಟ್ರೋಲ್‌ ಬಂಕ್‌ಗಳಿಗೆ ಮುಗಿಬಿದ್ದ ಜನ!

ಭಟ್ಕಳದ ಪೆಟ್ರೋಲ್‌ ಬಂಕ್‌ ಮುಂದೆ ಸಾಲುಗಟ್ಟಿ ನಿಂತಿರುವ ಬೈಕ್‌ ಸವಾರರು. -

Prabhakara R
Prabhakara R Mar 4, 2026 10:11 PM

ಭಟ್ಕಳ, ಮಾರ್ಚ್‌ 4: ಇರಾನ್-ಇಸ್ರೇಲ್ ಯುದ್ಧ (Iran-Israel war) ಹಿನ್ನೆಲೆಯಲ್ಲಿ ತೈಲ ಬೆಲೆ ಏರಿಕೆ ಭೀತಿಯಿಂದ ಭಟ್ಕಳದ ಪೆಟ್ರೋಲ್ ಬಂಕ್‌ಗಳಲ್ಲಿ ನೂಕುನುಗ್ಗಲು ಉಂಟಾಗಿದೆ. ಪೆಟ್ರೋಲ್ ಬೆಲೆ (Petrol price hike) ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಹೆಚ್ಚುವರಿ ಪೆಟ್ರೋಲ್ ಸಂಗ್ರಹಕ್ಕೆ‌ ಮುಗಿಬಿದ್ದಿರುವುದು ಕಂಡುಬಂದಿದೆ.

ಭಟ್ಕಳ ಪಟ್ಟಣದ ಪ್ರಮುಖ ಪೆಟ್ರೋಲ್ ಪಂಪ್‌ಗಳಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತಿದ್ದು, ಕೆಲವೇ ಗಂಟೆಗಳಲ್ಲಿ ಮೂರಕ್ಕೂ ಹೆಚ್ಚು ಬಂಕ್‌ಗಳಲ್ಲಿ ಪೆಟ್ರೋಲ್ ಸಂಪೂರ್ಣ ಖಾಲಿಯಾಗಿದೆ. ಕೇವಲ ವಾಹನಗಳಿಗೆ ಮಾತ್ರವಲ್ಲದೆ, ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿಯೂ ಲೀಟರ್‌ಗಟ್ಟಲೆ ಪೆಟ್ರೋಲ್ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಇಂದು ಕಂಡುಬಂದಿವೆ.

ಭಟ್ಕಳದಲ್ಲಿ ಪೆಟ್ರೋಲ್ ಸಿಗದ ಕಾರಣ ಜನರು ಅನಿವಾರ್ಯವಾಗಿ ನೆರೆಯ ಹೊನ್ನಾವರ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ಭಾಗದ ಬಂಕ್‌ಗಳಿಗೆ ತೆರಳಿ ಪೆಟ್ರೋಲ್ ಸಂಗ್ರಹಿಸುತ್ತಿದ್ದಾರೆ. ತೈಲ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಬೆಲೆ ಏರಿಕೆಯ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜನರು ಅನಗತ್ಯವಾಗಿ ಆತಂಕಕ್ಕೊಳಗಾಗಿ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಅತಿಯಾದ ಸಂಗ್ರಹಣೆಯಿಂದಾಗಿ ಕೃತಕ ಅಭಾವ ಸೃಷ್ಟಿಯಾಗುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ.

US-Israel-Iran War: ಶ್ರೀಲಂಕಾದಲ್ಲಿ ಇರಾನ್ ಯುದ್ಧನೌಕೆ ಮೇಲೆ ದಾಳಿ; 101 ಮಂದಿ ನಾಪತ್ತೆ