ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Rajyotsava Award 2026: ರಾಜ್ಯೋತ್ಸವ ಪ್ರಶಸ್ತಿ ಎಡವಟ್ಟು; ಕೊನೆಗೂ ಉತ್ತರ ಕನ್ನಡದವರಿಗೆ ಪ್ರಶಸ್ತಿ ಬಂತು!

ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾದಾಗ ಉತ್ತರ ಕನ್ನಡ ಜಿಲ್ಲೆಗೆ ಮಾನ್ಯತೆ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ತೀವ್ರ ಅಸಮಾಧಾನ ಹೊರಹಾಕಿದ್ದರು. ಅಭಿವೃದ್ಧಿಯಿಂದ ಹಿಡಿದು ರಾಜಕೀಯ ಪ್ರಾತಿನಿಧ್ಯದವರೆಗೂ ನಮ್ಮ ಜಿಲ್ಲೆಯನ್ನು ಸರ್ಕಾರಗಳು ಕಾಲ ಕಾಲಕ್ಕೆ ನಿರ್ಲಕ್ಷಿಸುತ್ತಲೇ ಬಂದಿವೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ಯು. ಭಟ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

ರಾಜ್ಯೋತ್ಸವ ಪ್ರಶಸ್ತಿ ಎಡವಟ್ಟು; ಕೊನೆಗೂ ಉತ್ತರ ಕನ್ನಡದವರಿಗೆ ಪ್ರಶಸ್ತಿ!

ಹಿರಿಯ ಪತ್ರಕರ್ತ ಜಿ.ಯು. ಭಟ್ -

Prabhakara R
Prabhakara R Oct 30, 2026 11:18 PM

ಕಾರವಾರ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 71 ಸಾಧಕರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava award 2026) ರಾಜ್ಯ ಸರ್ಕಾರ ಶುಕ್ರವಾರ ಘೋಷಿಸಿತ್ತು. ಆದರೆ, ಉತ್ತರ ಕನ್ನಡ ಜಿಲ್ಲೆಯ ಕೋಟಾದಡಿಯಲ್ಲಿ ʼಸಮಾಜ ಸೇವೆʼಗಾಗಿ ನೆರೆಯ ಉಡುಪಿ ಜಿಲ್ಲೆಯ ವೈದ್ಯರೊಬ್ಬರಿಗೆ ಪ್ರಶಸ್ತಿ ಘೋಷಿಸಿದ್ದಕ್ಕೆ ಜಿಲ್ಲೆಯಲ್ಲಿ ಜನಾಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಇದೀಗ ಪ್ರಶಸ್ತಿಯನ್ನು ಸ್ಥಳೀಯರಾದ ಹಿರಿಯ ಪತ್ರಕರ್ತ ಜಿ.ಯು.ಭಟ್ ( G.U. Bhat) ಅವರಿಗೆ ನೀಡಲು ನಿರ್ಧರಿಸಿದೆ.

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತ ಇಲಾಖೆಯಿಂದ ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಸಮಾಜ ಸೇವೆ ಕ್ಷೇತ್ರದಲ್ಲಿ ಡಾ.ಜಿ.ಎಸ್.ಚಂದ್ರಶೇಖರ್‌ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ತಪ್ಪಾದ ಕಾರಣ ಅವರ ಹೆಸರನ್ನು ಕೈಬಿಟ್ಟು ಉತ್ತರ ಕನ್ನಡ ಜಿಲ್ಲೆಯವರೇ ಆದ ಗಜಾನನ ಉಮಾಮಹೇಶ್ವರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಶ್ರೀಯುತರು ಸಾಹಿತ್ಯ, ಪತ್ರಿಕೋದ್ಯಮ, ರಂಗಭೂಮಿ,‌ ಚಲನಚಿತ್ರ‌ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ‌ ಸೇವೆಯಲ್ಲಿ ನಿರತರಾಗಿರುವ ಜಿ.ಯು.ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.‌ ಸಂಕೀರ್ಣ ವಿಭಾಗದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಇವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.



ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾದಾಗ ಉತ್ತರ ಕನ್ನಡ ಜಿಲ್ಲೆಗೆ ಮಾನ್ಯತೆ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ತೀವ್ರ ಅಸಮಾಧಾನ ಹೊರಹಾಕಿದ್ದರು. ಅಭಿವೃದ್ಧಿಯಿಂದ ಹಿಡಿದು ರಾಜಕೀಯ ಪ್ರಾತಿನಿಧ್ಯದವರೆಗೂ ನಮ್ಮ ಜಿಲ್ಲೆಯನ್ನು ಸರ್ಕಾರಗಳು ಕಾಲ ಕಾಲಕ್ಕೆ ನಿರ್ಲಕ್ಷಿಸುತ್ತಲೇ ಬಂದಿವೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರವು ಉತ್ತರ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಜಿ.ಯು. ಭಟ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.



55 ವರ್ಷಗಳ ಪತ್ರಿಕೋದ್ಯಮ ಸೇವೆಗಾಗಿ ಜಿ.ಯು. ಭಟ್‌ಗೆ ರಾಜ್ಯೋತ್ಸವ ಗೌರವ

ಐದು ದಶಕಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹೊನ್ನಾವರದ ಹಿರಿಯ ಪತ್ರಕರ್ತ ಗಜಾನನ ಉಮಾಮಹೇಶ್ವರ ಭಟ್ (ಜಿ.ಯು. ಭಟ್) ಅವರ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಸಂದಿದೆ.

1948ರ ಮೇ 3ರಂದು ಜನಿಸಿದ ಇವರು, ಸೇಂಟ್ ಥಾಮಸ್ ಹೈಸ್ಕೂಲ್ ಹಾಗೂ ಎಸ್.ಡಿ.ಎಂ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಉದಯವಾಣಿಯಲ್ಲಿ ಹಿರಿಯ ವರದಿಗಾರರಾಗಿ 55 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸಂಯುಕ್ತ ಕರ್ನಾಟಕದ ಹೊನ್ನಾವರ ವರದಿಗಾರರಾಗಿ ಹತ್ತು ವರ್ಷ ಕಾರ್ಯನಿರ್ವಹಿಸಿದ್ದಾರೆ. ಗ್ರಾಮೀಣ ವಿಕಾಸ ಹಾಗೂ ಸಮನ್ವಯ ವಾರಪತ್ರಿಕೆಗಳ ಸಂಪಾದಕರಾಗಿಯೂ ಗುರುತಿಸಿಕೊಂಡಿದ್ದಾರೆ.

ನಾಟಕ, ರಂಗಭೂಮಿ, ಕಿರುಕಥೆ, ಚಲನಚಿತ್ರ, ಸಹಕಾರ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಪತ್ರಿಕಾ ಅಕಾಡೆಮಿ, ರಾಜ್ಯ ನಾಟಕ ಅಕಾಡೆಮಿ ಸೇರಿದಂತೆ ವಿವಿಧ ಪ್ರಶಸ್ತಿ ಗೌರವಗಳಿಗೆ ಭಾಜನರಾಗಿದ್ದಾರೆ. ಹಿರಿಯ ಪತ್ರಕರ್ತರಾಗಿ ಜಿಲ್ಲೆಯ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆ ಗಮನಾರ್ಹವಾಗಿದೆ.