ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road accident: ಮರಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಕಾರ್, ಇಬ್ಬರ ಸಾವು, ಒಬ್ಬ ಗಂಭೀರ

ಡಿಕ್ಕಿಯ ರಭಸಕ್ಕೆ ಕಾರ್ ಎರಡು ಮರಗಳ ಮಧ್ಯೆ ಸಿಲುಕಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಾಲಕನ ಗುರುತು ಪತ್ತೆಯಾಗಿಲ್ಲ. ಕಾರ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು ಮೂರು ಜನರು ಪ್ರಯಾಣಿಸುತ್ತಿದ್ದರು.

ಮರಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಕಾರ್, ಇಬ್ಬರ ಸಾವು, ಒಬ್ಬ ಗಂಭೀರ

ದಾಂಡೇಲಿ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Apr 21, 2026 9:02 AM

ಕಾರವಾರ, ಏ.21: ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿ (Dandeli) ಕರ್ಕಾ ಕ್ರಾಸ್–ಅಜಗಾಂವ ಬಳಿ ಭೀಕರ ಅಪಘಾತ (Road accident) ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರ್ ಎರಡು ಮರಗಳ ಮಧ್ಯೆ ಸಿಲುಕಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಾಲಕನ ಗುರುತು ಪತ್ತೆಯಾಗಿಲ್ಲ. ಕಾರ್‌ನಲ್ಲಿ ಚಾಲಕ ಸೇರಿದಂತೆ ಒಟ್ಟು ಮೂರು ಜನರು ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

ಕಾರು ಮೈಮೇಲೆ ಹರಿದು ಬಾಲಕ ಸಾವು

ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತವೊಂದು ಸಂಭವಿಸಿದೆ. ಕಾರು ಮೈಮೇಲೆ ಹರಿದು 13 ವರ್ಷದ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ತಂದೆಯ ಬಟ್ಟೆ ಅಂಗಡಿಯ ಮುಂದೆ ಶೋಭಿತ್ (13) ಎಂಬ ಬಾಲಕ ಆಟ ಆಡುತ್ತಿದ್ದ ವೇಳೆ ವೇಗವಾಗಿ ಬಂದು ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ಶೋಭಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು: ಟ್ರಕ್‌ಗೆ ಡಿಕ್ಕಿ ಹೊಡೆದ ವೇಗವಾಗಿ ಬಂದ ಬೈಕ್, ವಿಡಿಯೋ ನೋಡಿ