ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು: ರಾಘವೇಶ್ವರ ಶ್ರೀ

ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ. -

Profile
Siddalinga Swamy Aug 21, 2026 8:33 PM

ಗೋಕರ್ಣ, ಆ.21: ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ ಸಾಮಾನ್ಯನೂ ಕೂಡ ಅಗ್ನಿಜಯವನ್ನು ಸಾಧಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ (Sri Raghaveshwara Bharathi Swamiji) ಹೇಳಿದರು.

Annabrahma Chaturmasya

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ಶುಕ್ರವಾರ 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಮಹಾನ್ ವ್ಯಕ್ತಿಗಳ ಜೀವನದಲ್ಲಿಯೂ ಕಷ್ಟಗಳು ಬರುತ್ತವೆ ಎಂದ ಶ್ರೀಗಳು, ನಳ - ದಮಯಂತಿಯ ಚರಿತ್ರೆಯ ಮೂಲಕ ನಳನಿಗೆ ಅಗ್ನಿಯ ಮೇಲಿದ್ದ ಪ್ರಭಾವ ಹಾಗೂ ಬಲವನ್ನು ವಿವರಿಸಿ, ನಳನು ಸಂಕಷ್ಟಗಳ ಸರಮಾಲೆಯ ಮಧ್ಯದಲ್ಲಿದ್ದಾಗ ಆತನ ಮಹತ್ವ ಮತ್ತು ಸಾಮರ್ಥ್ಯ ಜಗತ್ತಿನ ಮುಂದೆ ಪ್ರಕಟವಾಯಿತು. ಪಂಚಭೂತಗಳ ಮೇಲೆ ನಳನು ಸಾಧಿಸಿಕೊಂಡಿದ್ದ ನಿಯಂತ್ರಣದಿಂದ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

Ramachandrapura mutt

ತೇಗು ಬಂದ ನಂತರ ಊಟವನ್ನು ನಿಲ್ಲಿಸಬೇಕು ಎನ್ನಲಾಗಿದೆ. ಆದರೆ ಆ ಸಮಯದಲ್ಲಿ ಎಲೆಯ ಮೇಲೆ ಉಳಿದಿರುವ ಆಹಾರವನ್ನು ಹಾಗೆಯೇ ಬಿಡಬೇಕೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನಮ್ಮ ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಆಹಾರವನ್ನು ಎಲೆಗೆ ಹಾಕಿಸಿಕೊಳ್ಳಬಾರದು. ಬಡಿಸುವವರಿಗೂ ಈ ಬಗ್ಗೆ ಪರಿವು ಅಗತ್ಯ. ಬಾಳೆ ಎಲೆಯಲ್ಲಿ ಊಟವನ್ನು ಬಿಟ್ಟರೆ ಅದು ವ್ಯರ್ಥ. ಆದರೆ ಹೆಚ್ಚಾದ ಆಹಾರವನ್ನು ನಾವು ಸೇವಿಸಿದರೆ ಅದು ಅನರ್ಥಕ್ಕೆ ಕಾರಣ. ಒಂದೊಮ್ಮೆ ಎಲೆಯಲ್ಲಿ ಆಹಾರವನ್ನು ವ್ಯರ್ಥ ಮಾಡಿದರೆ ಅದು ನಿಜವಾಗಿ ವ್ಯರ್ಥವಲ್ಲ. ಅದು ಬೇರೆ ಯಾವುದೋ ಜೀವಿಯ ಪಾಲಿಗೆ ಆಹಾರವಾಗುತ್ತದೆ ಎಂದು ತಿಳಿಸಿದರು.

Gokarna News

ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಸಮಾಜಕ್ಕೆ ಕರೆನೀಡಿದರು.

ಶ್ರೀಕ್ಷೇತ್ರ ಹಟ್ಟಿಯಂಗಡಿಯ ಧರ್ಮದರ್ಶಿಗಳಾದ ವೇ.ಮೂ. ಬಾಲಚಂದ್ರ ಭಟ್ಟ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ಜೆ.ಡಿ.ಎಸ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಸೂರಜ್ ನಾಯ್ಕ ಸೋನಿ, ಶೇಖರ ನಾಯ್ಕ ಶ್ರೀಗಳ ಆಶೀರ್ವಾದ ಪಡೆದರು. ಮಂಜುನಾಥ ಸುವರ್ಣಗದ್ದೆ, ಶಾಂತಾರಾಮ ಹೆಗಡೆ ಕೊಂಡದಕುಳಿ, ದಿನಪ್ರಧಾನರಾಗಿ ಆರ್.ಎಸ್. ಹೆಗಡೆ ಹರಗಿ ದಂಪತಿಗಳು ಉಪಸ್ಥಿತರಿದ್ದರು.

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ: ಪಾರಂಪರಿಕವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ನಾಮಧಾರಿ ಸಮಾಜದ ಗುರುಬಂಧುಗಳಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಪೂಜೆಯನ್ನು ಸ್ವೀಕರಿಸಿ ಸಮಾಜವನ್ನು ಆಶೀರ್ವದಿಸಿದ ಶ್ರೀಗಳು, ಪರಸ್ಪರ ಗುರು ಶಿಷ್ಯರ ಭೇಟಿ ಆಗಾಗ ನಡೆದಾಗ ಬಾಂಧವ್ಯ ಗಟ್ಟಿಯಾಗಲು ಸಾಧ್ಯ. ಗುರುಪರಂಪರೆಯ ಅನುಗ್ರಹ ಈ ಸಮಾಜದ ಮೇಲೆ ಸದಾ ಇರಲಿದ್ದು, ಸಮಾಜದ ಆಗುಹೋಗುಗಳ ಜತೆಗೆ ಶ್ರೀಮಠ ಸದಾ ಇರಲಿದೆ ಎಂದರು. ನಾಮಧಾರಿ ಸಮಾಜದ ಕುಮಟಾ ತಾಲೂಕಾ ಅಧ್ಯಕ್ಷ ಅರುಣಕುಮಾರ ಜಿ. ನಾಯ್ಕ, ಶೇಖರ ನಾಯ್ಕ, ಹರೀಶ ನಾಯ್ಕ, ಅಶೋಕ ನಾಯ್ಕ ಸೇರಿದಂತೆ ಸಮಾಜ ಬಂಧುಗಳು ಉಪಸ್ಥಿತರಿದ್ದರು.